×
Ad

ಬಿಜೆಪಿ ಟಿಕೆಟ್ ನಿರಾಕರಿಸಿದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ವರುಣ್ ಗಾಂಧಿ?

Update: 2024-03-20 15:21 IST

 ವರುಣ್ ಗಾಂಧಿ | Photo: indiatoday.in

ಹೊಸದಿಲ್ಲಿ: ಉತ್ತರ ಪ್ರದೇಶದಲ್ಲಿನ ತಮ್ಮ ಸ್ವಕ್ಷೇತ್ರವಾದ ಪಿಲಿಭಿಟ್ ನಿಂದ ಮರು ಸ್ಪರ್ಧಿಸಲು ಬಿಜೆಪಿಯೇನಾದರೂ ಟಿಕೆಟ್ ನಿರಾಕರಿಸಿದರೆ, ಬಿಜೆಪಿ ಸಂಸದ ವರುಣ್ ಗಾಂಧಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ ಎಂದು ವರದಿಯಾಗಿದೆ.

2019ರ ಲೋಕಸಭಾ ಚುನಾವಣೆಯಲ್ಲಿ ಪಿಲಿಭಿಟ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ವರುಣ್ ಗಾಂಧಿ ಸತತ ಮೂರನೆಯ ಬಾರಿಗೆ ಪುನರಾಯ್ಕೆಯಾಗಿದ್ದರು.

ಪಿಲಿಭಿಟ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನು ನಿರ್ಧರಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಚುನಾವಣಾ ಸಮಿತಿಯ ಸಭೆಯನ್ನು ಬಿಜೆಪಿ ಇನ್ನಷ್ಟೆ ನಡೆಸಬೇಕಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News