×
Ad

ಬೆಂಗಳೂರು| ಬಿಎಂಟಿಸಿ ಬಸ್ ಢಿಕ್ಕಿ; ಮಹಿಳೆ ಸಾವು

Update: 2023-12-28 14:19 IST

ಸಾಂದರ್ಭಿಕ ಚಿತ್ರ

ಬೆಂಗಳೂರು: ಹಲಸೂರ್ ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ, ಸುಬ್ಭಯ್ಯ ಸರ್ಕಲ್ ನಲ್ಲಿ  ರಸ್ತೆ ದಾಟುತ್ತಿದ್ದ ಮಹಿಳೆಗೆ ಬಿಎಂಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಮಹಿಳೆ ಸಾವನ್ನಪ್ಪಿದ್ದಾರೆ.

 ಕಬ್ಬನ್ ಪೇಟೆಯ ನಿವಾಸಿ ಪುಷ್ಪಾ ಮೃತಪಟ್ಟವರು.

ಮನೆಯ ಸಮೀಪದಲ್ಲಿರುವ ಬೇಕರಿಗೆ ಹೋಗಲು ರಸ್ತೆ ದಾಟುತ್ತಿದ್ದಾಗ ಈ ಅಪಘಾತ ನಡೆದಿದ್ದು, ತಲೆಗೆ ತೀವ್ರವಾಗಿ ಪೆಟ್ಟಾಗಿದ್ದರಿಂದ ಹೆಚ್ಚಿನ ರಕ್ತಸ್ರಾವವಾಗಿತ್ತು. ತಕ್ಷಣವೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಹಲಸೂರು ಗೇಟ್ ಠಾಣಾ ಪೊಲೀಸರು ಬಿಎಂಟಿಸಿ ಬಸ್ ಚಾಲಕ ನಾಗರಾಜ್ ರನ್ನು ಬಂಧಿಸಿದ್ದು, ಅಫಘಾತಕ್ಕೆ ಕಾರಣ ಏನು ಎನ್ನುವ ನಿಖರ ಮಾಹಿತಿಯನ್ನು ಪಡೆದುಕೊಳ್ಳಲು ಚಾಲಕನನ್ನು ವಿಚಾರಣೆಗೆ ಒಳಪಡಿಸಿ, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಈ ಘಟನೆಯು ಹಲಸೂರು ಪೊಲೀಸ್  ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News