×
Ad

ಆದಿತ್ಯನಾಥ್‌ ಗೆ ಜೀವ ಬೆದರಿಕೆ ಆರೋಪ: ಮಾನಸಿಕ ಅಸ್ವಸ್ಥ ಮಹಿಳೆಯ ಬಂಧನ

Update: 2024-11-03 14:05 IST

ಉತ್ತರಪ್ರದೇಶ ಸಿಎಂ ಆದಿತ್ಯನಾಥ್ (PTI)

ಉತ್ತರಪ್ರದೇಶ: ಮುಖ್ಯಮಂತ್ರಿ ಆದಿತ್ಯನಾಥ್ ಗೆ ಜೀವ ಬೆದರಿಕೆಯೊಡ್ಡಿದ ಆರೋಪದಲ್ಲಿ 24 ವರ್ಷದ ಮಹಿಳೆಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ ಎಂದು ಸುದ್ದಿ ಸಂಸ್ಥೆ PTI ವರದಿ ಮಾಡಿದೆ. 

ಮಹಾರಾಷ್ಟ್ರದ ಥಾಣೆಯ ಉಲ್ಲಾಸ್‌ ನಗರ ನಿವಾಸಿ ಫಾತಿಮಾ ಖಾನ್ ಬಂಧಿತ ಮಹಿಳೆ. ಇವರು ಮಾನಸಿಕ ಅಸ್ವಸ್ಥರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಶನಿವಾರ ಸಂಜೆ ಮುಂಬೈ ಟ್ರಾಫಿಕ್ ಪೊಲೀಸರ ವಾಟ್ಸಪ್ ಸಹಾಯವಾಣಿಗೆ ಬೆದರಿಕೆ ಸಂದೇಶ ಕಳುಹಿಸಲಾಗಿತ್ತು. ಉತ್ತರಪ್ರದೇಶ ಸಿಎಂ ಆದಿತ್ಯನಾಥ್ 10 ದಿನಗಳಲ್ಲಿ ರಾಜೀನಾಮೆ ನೀಡದಿದ್ದರೆ ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದೀಕಿಯಂತೆ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಲಾಗಿತ್ತು. ಬೆದರಿಕೆ ಸಂದೇಶದ ಹಿನ್ನೆಲೆಯಲ್ಲಿ ಆದಿತ್ಯನಾಥ್ ಗೆ ಭದ್ರತೆಯನ್ನು ಕೂಡ ಹೆಚ್ಚಿಸಲಾಗಿತ್ತು.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News