×
Ad

ಗಡಿ ನಿಯಂತ್ರಣ ರೇಖೆಯ ಬಳಿ ಪಾಕಿಸ್ತಾನದಿಂದ ಶೆಲ್ ದಾಳಿ: ಓರ್ವ ಮಹಿಳೆ ಬಲಿ

Update: 2025-05-09 12:58 IST

Photo credit: PTI

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉರಿ ಪ್ರಾಂತ್ಯದಲ್ಲಿ ಪಾಕಿಸ್ತಾನದ ಸೇನಾ ಪಡೆಗಳು ನಡೆಸಿದ ಶೆಲ್ ದಾಳಿಯಲ್ಲಿ ಓರ್ವ ಮಹಿಳೆ ಮೃತಪಟ್ಟು, ಆಕೆಯ ಕುಟುಂಬದ ಇನ್ನಿಬ್ಬರು ಸದಸ್ಯರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.

ಪಾಕಿಸ್ತಾನ ಪಡೆಗಳ ಈ ಆಕ್ರಮಣಕಾರಿ ದಾಳಿಗೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ ಎಂದು ಶುಕ್ರವಾರ ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿ ಪ್ರಾಂತ್ಯದ ಗಡಿ ನಿಯಂತ್ರಣದ ರೇಖೆಯುದ್ದಕ್ಕೂ ಕದನ ವಿರಾಮ ಉಲ್ಲಂಘಿಸಿರುವ ಪಾಕಿಸ್ತಾನ ಪಡೆಗಳು, ನಾಗರಿಕರ ವಸತಿ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಗುರುವಾರ ರಾತ್ರಿಯಿಡೀ ಶೆಲ್ ದಾಳಿ ನಡೆಸಿವೆ ಎಂದೂ ಅವರು ಹೇಳಿದ್ದಾರೆ.

ಪಾಕಿಸ್ತಾನದ ಶೆಲ್ ದಾಳಿಯಿಂದ ತಪ್ಪಿಸಿಕೊಂಡು ಪರಾರಿಯಾಗಲು ಯತ್ನಿಸುತ್ತಿದ್ದ ವೇಳೆ ಕಾರೊಂದರ ಮೇಲೆ ಅಪ್ಪಳಿಸಿದ ಶೆಲ್‌ನಿಂದಾಗಿ ಒಂದೇ ಕುಟುಂಬದ ಮೂವರು ಗಾಯಗೊಂಡರು. ತಕ್ಷಣವೇ ಅವರನ್ನೆಲ್ಲ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಗಾಯಾಳುಗಳ ಪೈಕಿ ನರ್ಗೀಸ್ ಬೇಗಂ ಎಂಬ ಮಹಿಳೆ ಮೃತಪಟ್ಟಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News