×
Ad

ತಮಿಳುನಾಡು | ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಥಳಿತ

Update: 2025-09-07 10:25 IST

Photo | NDTV

ಚೆನ್ನೈ: ತಮಿಳುನಾಡಿನ ಕಡಲೂರು ಜಿಲ್ಲೆಯ ಪನ್ರುತಿ ಬಳಿ ನಾಲ್ವರು ಮಹಿಳೆಯರ ಗುಂಪೊಂದು ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿ ವಿವಸ್ತ್ರಗೊಳಿಸಲು ಯತ್ನಿಸಿರುವ ಆರೋಪ ಕೇಳಿ ಬಂದಿದೆ.

ಈ ಕುರಿತ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ವೈರಲ್ ವೀಡಿಯೊದಲ್ಲಿ, ಮಹಿಳೆಯನ್ನು ಸೀರೆಯಿಂದ ಮರಕ್ಕೆ ಕಟ್ಟಿ ಹಾಕಿರುವುದು, ನಾಲ್ವರು ಮಹಿಳೆಯರು ಆಕೆಯನ್ನು ನಿಂದಿಸುತ್ತಾ ಹಲ್ಲೆ ನಡೆಸುವುದು, ವಿವಸ್ತ್ರಗೊಳಿಸಲು ಪ್ರಯತ್ನಿಸುತ್ತಿರುವುದು ಕಂಡು ಬಂದಿದೆ.

ಈ ವೇಳೆ ಮಹಿಳೆಯೋರ್ವರು ಮಧ್ಯಪ್ರವೇಶಿಸಿ ಹಲ್ಲೆಯನ್ನು ತಡೆಯಲು ಯತ್ನಿಸಿದ್ದಾರೆ. ಮತ್ತೋರ್ವ ಮಹಿಳೆ ಘಟನೆಯ ವೀಡಿಯೊ ಚಿತ್ರೀಕರಿಸಿದ್ದಾರೆ. 

“ಭೂ ವಿವಾದಕ್ಕೆ ಸಂಬಂಧಿಸಿ ಈ ದೌರ್ಜನ್ಯ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳಲ್ಲಿ ಓರ್ವಳನ್ನು ಬಂಧಿಸಲಾಗಿದ್ದು, ಇನ್ನೂ ಮೂವರು ಪರಾರಿಯಾಗಿದ್ದಾರೆ. ಆರೋಪಿಗಳನ್ನು ಪತ್ತೆಹಚ್ಚಲು ನಾವು ವಿಶೇಷ ತಂಡಗಳನ್ನು ರಚಿಸಿದ್ದೇವೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೋರ್ವರು ತಿಳಿಸಿದ್ದಾರೆ.  


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News