ಸುಪ್ರೀಂ ಕೋರ್ಟ್ ಕಲಾಪದ ವೇಳೆ ಮುಖ್ಯ ನ್ಯಾಯಮೂರ್ತಿ ಗವಾಯಿ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲ
ʼಸನಾತನ ಸಂಸ್ಥೆಗೆ ಅವಮಾನ ಸಹಿಸುವುದಿಲ್ಲʼ ಎಂದು ಕೂಗಾಡಿದ ಆರೋಪಿ
Update: 2025-10-06 13:23 IST
ಸಿಜೆಐ ಬಿ.ಆರ್.ಗವಾಯಿ (File Photo credit: PTI)
ಹೊಸದಿಲ್ಲಿ: ಸುಪ್ರೀಂ ಕೋರ್ಟ್‌ನಲ್ಲಿ ಸೋಮವಾರದ ಕಲಾಪದ ವೇಳೆ ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ವಕೀಲನೋರ್ವ ಶೂ ಎಸೆಯಲು ಯತ್ನಿಸಿದ್ದಾನೆ.
ಆರೋಪಿ ವಕೀಲನನ್ನು ನ್ಯಾಯಾಲಯದಿಂದ ಹೊರಗೆ ಕರೆದೊಯ್ಯುತ್ತಿದ್ದಾಗ, ಸನಾತನ ಧರ್ಮದ ಅವಮಾನವನ್ನು ಭಾರತ ಸಹಿಸುವುದಿಲ್ಲ ಎಂದು ಜೋರಾಗಿ ಕೂಗಾಡಿದ್ದಾನೆ. ಆರೋಪಿಯನ್ನು ತಕ್ಷಣವೇ ಬಂಧಿಸಲಾಗಿದೆ.
ಮುಖ್ಯ ನ್ಯಾಯಾಧೀಶರು ಘಟನೆಯ ವೇಳೆ ಶಾಂತರಾಗಿದ್ದರು ಮತ್ತು ಯಾವುದೇ ಅಡೆತಡೆಯಿಲ್ಲದೆ ವಿಚಾರಣೆಯನ್ನು ಮುಂದುವರಿಸಿದರು.
"ಇದರಿಂದ ವಿಚಲಿತರಾಗಬೇಡಿ. ಈ ವಿಷಯಗಳು ನನ್ನ ಮೇಲೆ ಪರಿಣಾಮ ಬೀರುವುದಿಲ್ಲ. ಕಲಾಪ ಮುಂದುವರಿಸಿ" ಎಂದು ಮುಖ್ಯ ನ್ಯಾಯಮೂರ್ತಿ ಗವಾಯಿ ಹೇಳಿದರು.