ಸಂಸತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಯೂಸುಫ್ ಪಠಾಣ್
Update: 2024-06-25 17:29 IST
Photo : sansad tv video grab
ಹೊಸದಿಲ್ಲಿ : ಭಾರತೀಯ ಕ್ರಿಕೆಟ್ ತಂಡದ ಮಾಜಿ ಕ್ರಿಕೆಟಿಗ, ತೃಣಮೂಲ ಕಾಂಗ್ರೆಸ್ ಸದಸ್ಯ ಯೂಸೂಫ್ ಪಠಾಣ್ 18 ನೇ ಲೋಕಸಭೆಯ ಸದಸ್ಯರಾಗಿ ಮಂಗಳವಾರ ಪ್ರಮಾಣ ವಚನ ಸ್ವೀಕರಿಸಿದರು.
ಪಶ್ವಿಮ ಬಂಗಾಳದ ಅಕೋಟ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್‌ನ ಅಧೀರ್ ರಂಜನ್ ಚೌಧರಿ ಅವರನ್ನು ಸೋಲಿಸಿ ಯೂಸುಫ್ ಪಠಾಣ್ ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಕ್ರಿಕೆಟ್ ಬಳಿಕ ಈಗ ಯೂಸುಫ್ ಪಠಾಣ್ ಖಾನ್ ಅವರು ರಾಜಕೀಯದ ಇನ್ನಿಂಗ್ಸ್ ಆರಂಭಿಸುತ್ತಿದ್ದಾರೆ.