×
Ad

ಜಾತಿ ನಿಂದನೆ ಆರೋಪ: ಪುನೀತ್ ಕೆರೆಹಳ್ಳಿ ವಿರುದ್ಧ ದೂರು ದಾಖಲು

Update: 2023-11-01 09:00 IST

Photo: facebook.com/puneeth.sathish

ಬೆಂಗಳೂರು: ಇದ್ರೀಸ್‌ ಪಾಷಾ ಕೊಲೆ ಪ್ರಕರಣದ ಆರೋಪಿ ಹಾಗೂ ಸಂಘಪರಿವಾರದ ಮುಖಂಡ ಪುನೀತ್ ಕೆರೆಹಳ್ಳಿಯ ವಿರುದ್ಧ  ಕನ್ನಡ ಹೋರಾಟಗಾರ ಭೈರಪ್ಪ ಹರೀಶ್ ಕುಮಾರ್ ಅವರು ಸಂಪಿಗೆಹಳ್ಳಿ ಠಾಣೆಯಲ್ಲಿ  ದೂರು ದಾಖಲಿಸಿದ್ದು, ಬಂಧನದ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ದಲಿತನಾಗಿರುವ ಕಾರಣ ತನ್ನನ್ನು ಪುನೀತ್ ಕೆರೆಹಳ್ಳಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಜಾತಿ ನಿಂದನೆ ಮಾಡಿದ್ದಾನೆ ಎಂದು ಭೈರಪ್ಪ ಹರೀಶ್ ಕುಮಾರ್ ಅವರು ದೂರಿನಲ್ಲಿ ತಿಳಿಸಿದ್ದಾರೆ.

ನಾನೊಬ್ಬ ಕನ್ನಡಪರ ಹೋರಾಟಗಾರನಾಗಿದ್ದು, ಇತ್ತೀಚೆಗೆ ಇದ್ರೀಸ್ ಪಾಷಾ ಕೊಲೆ ಆರೋಪದಲ್ಲಿ ಜೈಲು ಶಿಕ್ಷೆಯಿಂದ ಬಿಡುಗಡೆಗೊಂಡ ಬಳಿಕವೂ ಸಮಾಜದ ಸ್ವಾಸ್ಥ್ಯ ಕದಡಲು ಯತ್ನಿಸುತ್ತಿದ್ದ ಪುನೀತ್ ಕೆರೆಹಳ್ಳಿಯ ಬಗ್ಗೆ ಜಾಗೃತರಾಗಿರುವಂತೆ ಸಾಮಾಜಿಕ ಕಳಕಳಿಯಿಂದ ಮಾಧ್ಯಮ ವರದಿಯನ್ನು ಫೇಸ್ ಬುಕ್ ಪೋಸ್ಟ್ ನಲ್ಲಿ ಹಂಚಿಕೊಂಡಿದ್ದೆ. ಇದಕ್ಕೆ ಪ್ರತಿಕ್ರಿಯೆ ಎಂಬಂತೆ ದಿನಾಂಕ 17-10-2023 ರಂದು ಪುನೀತ್ ಕೆರೆಹಳ್ಳಿ, ನನ್ನ ಮತ್ತು ನನ್ನ ಪತ್ನಿ, ಮಕ್ಕಳ ವಿರುದ್ಧ ನಿಂದನಾತ್ಮಕ ಮಾತುಗಳನ್ನಾಡಿದ್ದಾನೆ. ನನ್ನ ಪತ್ನಿ ,ಮಕ್ಕಳು ತಲೆ ಎತ್ತಿ ನಡೆಯಂದಾಗುತ್ತದೆ ಎಂದು ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News