ಪೊಲೀಸ್ ದೌರ್ಜನ್ಯಕ್ಕೊಳಗಾದ ವ್ಯಕ್ತಿಯ ಆತ್ಮಹತ್ಯೆ
Update: 2015-12-30 16:21 IST
ತಿರುವನಂತಪುರ, ಡಿ.29: ಪೊಲೀಸರಿಂದ ದೌರ್ಜನ್ಯಕ್ಕೊಳಗಾದನೆನ್ನಲಾದ ಕೇರಳದ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.
36ರ ಹರೆಯದ ಆ ವ್ಯಕ್ತಿಯ ಮೇಲೆ ಪೊಲೀಸರು ಹಲ್ಲೆ ಮಾಡಿದ್ದಾರೆಂದು ಆರೋಪಿಸಿದ ಆತನ ಸಂಬಂಧಿಕರು ಅವನ ಮೃತದೇಹವನ್ನು ಪೊಲೀಸ್ ಠಾಣೆಗೆ ತಂದು ಪ್ರತಿಭಟನೆ ನಡೆಸಿದ್ದಾರೆ.
ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮೃತನ ಬಂಧುಗಳು ಹಾಗೂ ಸ್ಥಳೀಯರು ಆಗ್ರಹಿಸಿದ್ದಾರೆ. ಮೃತನ ಕುಟುಂಬಕ್ಕೆ ಪರಿಹಾರ ನೀಡುವಂತೆಯೂ ಅವರು ಒತ್ತಾಯಿಸಿದ್ದಾರೆ.
ತಾವು ಕೇವಲ ತಮ್ಮ ಕರ್ತವ್ಯ ಮಾಡಿದ್ದೇವೆ. ಮೃತನು ವಾಸಿಸುತ್ತಿದ್ದ ಪ್ರದೇಶದಲ್ಲಿ ಕುಖ್ಯಾತ ಚಟುವಟಿಕೆಗಳ ಅನೇಕ ಪ್ರಕರಣಗಳು ವರದಿಯಾಗಿದ್ದು, ಅಲ್ಲಿ ಪೊಲೀಸರು ಗಸ್ತು ಹೆಚ್ಚಿಸಲಾಗಿದೆಯೆಂದು ಪೊಲೀಸರ ಪ್ರತಿಪಾದಿಸಿದ್ದಾರೆ.