ನಾಳೆ ಪೇಜಾವರ ಶ್ರೀಗೆ ಪೌರ ಸಮ್ಮಾನ

Update: 2016-01-01 18:36 GMT

ಮಂಗಳೂರು, ಜ. 1: ಐತಿಹಾಸಿಕವಾಗಿ 5ನೆ ಬಾರಿ ಉಡುಪಿ ಪರ್ಯಾಯ ಸರ್ವಜ್ಞ ಪೀಠಾರೋಹಣಗೈಯಲಿರುವ ಪೇಜಾವರ ಮಠಾಧೀಶ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಹಾಗೂ ಕಿರಿಯ ಯತಿ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರಿಗೆ ಮಂಗಳೂರಿನ ಸಮಸ್ತ ನಾಗರಿಕರ ಪರವಾಗಿ ಪೌರ ಸಮ್ಮಾನ ಜ.3ರಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ. ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕಾರ್ಯಕ್ರಮದ ಪ್ರಧಾನ ಸಂಚಾಲಕ ಶಶಿಧರ್ ಹೆಗ್ಡೆ, ಮೇಯರ್ ಜೆಸಿಂತಾ ವಿಜಯ್ ಆಲ್ಫ್ರೆಡ್ ಅಧ್ಯಕ್ಷತೆ ವಹಿಸಲಿರುವರು. ಸಂಜೆ 4 ಗಂಟೆಗೆ ಶರವು ಮಹಾಗಣಪತಿ ದೇವಸ್ಥಾನದ ಬಳಿಯಿಂದ ಯತಿಧ್ವಯರನ್ನು ಮೆರವಣಿಗೆಯ ಮೂಲಕ ಪುರಭವನದವರೆಗೆ ಕರೆತರಲಾಗುವುದು ಎಂದರು.

ಪರ್ಯಾಯ ಸಮಿತಿಯ ಪ್ರ.ಕಾರ್ಯದರ್ಶಿ ಎಸ್.ಪ್ರದೀಪಕುಮಾರ್‌ಕಲ್ಕೂರ ಮಾತನಾಡಿ, ಬೆಂಗಳೂರು ಪೂರ್ಣಪ್ರಜ್ಞ ವಿದ್ಯಾಪೀಠದ ಹಿರಿಯ ವಿದ್ವಾಂಸ ವಿಜಯೀಂದ್ರ ಆಚಾರ್ಯ ಅಭಿನಂದನಾ ಭಾಷಣಗೈಯಲಿದ್ದಾರೆ. ಅಪರಾಹ್ನ 3:30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ವಿವರಿಸಿದರು. ಸುದ್ದಿಗೋಷ್ಠಿಯಲ್ಲಿ ಸಮಿತಿಯ ಸದಸ್ಯರಾದ ಎಂ.ಬಿ.ಪುರಾಣಿಕ್, ಸುಧಾಕರ ರಾವ್ ಪೇಜಾವರ, ಚಂದ್ರಶೇಖರ ಶೆಟ್ಟಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News