ಜ.4ರಂದು ರಕ್ತದಾನ ಶಿಬಿರ

Update: 2016-01-01 18:43 GMT

ಬಂಟ್ವಾಳ, ಜ.1: ಮಂಗಳೂರಿನ ಝೈನಬಾ ಫೌಂಡೇಶನ್ ಮತ್ತು ಮೆಲ್ಕಾರ್ ಮಹಿಳಾ ಕಾಲೇಜು ಜಂಟಿ ಆಶ್ರಯದಲ್ಲಿ ಕೆಎಂಸಿ ಆಸ್ಪತ್ರೆ ಮಂಗಳೂರು ಸಹಯೋಗದೊಂದಿಗೆ ರಕ್ತದಾನ ಶಿಬಿರ ಜ.4ರಂದು ಕಾಲೇಜು ವಠಾರದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ದೇರಳಕಟ್ಟೆ ಯೆನೆಪೊಯ ಮೆಡಿಕಲ್ ಕಾಲೇಜಿನ ಪ್ರಾಧ್ಯಾಪಕ ಡಾ. ಶಿಹಾಬ್ ಹಸನ್ ಉದ್ಘಾಟಿಸುವರು.

ಝೈನಬಾ ಫೌಂಡೇಶನ್ ಹಾಗೂ ಮೆಲ್ಕಾರ್ ಮಹಿಳಾ ಕಾಲೇಜಿನ ಸ್ಥಾಪಕಾಧ್ಯಕ್ಷ ಹಾಜಿ ಎಸ್.ಎಂ.ರಶೀದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಕೆಎಂಸಿ ಆಸ್ಪತ್ರೆಯ ಬ್ಲಡ್ ಬ್ಯಾಂಕ್ ಮುಖ್ಯಸ್ಥೆ ಡಾ. ದೀಪಾ ಅಡಿಗ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News