ಮೋದಿ ಪಾಕ್ ಭೇಟಿ ವಿರುದ್ಧದ ಅರ್ಜಿ ತಿರಸ್ಕರಿಸಿದ ನ್ಯಾಯಾಲಯ
ಲಾಹೋರ್, ಜ.3: ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ಪಾಕಿಸ್ತಾನಕ್ಕೆ ನೀಡಿರುವ ಭೇಟಿಯ ವಿರುದ್ಧ ಲಾಹೋರ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದ್ದು, ನ್ಯಾಯಾಲಯ ಇದನ್ನು ತಳ್ಳಿಹಾಕಿದೆ.
‘‘ಮೋದಿಯವರು ಯಾವುದೇ ಅಧಿಕೃತ ಅನುಮತಿ ಇಲ್ಲದೆಯೇ ತನ್ನ ನಿಯೋಗದೊಂದಿಗೆ ಪಾಕ್‌ಗೆ ಭೇಟಿ ನೀಡಿದ್ದಾರೆ. ಅವರ ಭೇಟಿಯ ಮಾಹಿತಿ ಸಾಮಾಜಿಕ ಮಾಧ್ಯಮಗಳಿಂದ ಲಭ್ಯವಾಗಿದೆ ಮತ್ತು ಈ ಭೇಟಿಗೆ ಸಂಬಂಧಿಸಿದಂತೆ ಸೂಕ್ತ ಕಾನೂನು ಪ್ರಕ್ರಿಯೆ ನಡೆದಿಲ್ಲ ಎಂದು ಮುನೀರ್ ಅಹ್ಮದ್ ಎಂಬವರು ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯಲ್ಲಿ ದೂರಿದ್ದಾರೆ ಎಂದು ‘ದ ನೇಶನ್’ ಪತ್ರಿಕೆ ವರದಿ ಮಾಡಿದೆ.
ಪಾಕ್ ಸರಕಾರ, ನಾಗರಿಕ ವಿಮಾನಯಾನ ಸಂಸ್ಥೆ ಹಾಗೂ ವಿಮಾನ ನಿಲ್ದಾಣದ ಭದ್ರತಾಪಡೆಗಳನ್ನು ಅರ್ಜಿಯಲ್ಲಿ ಪ್ರತಿವಾದಿಗಳನ್ನಾಗಿ ಹೆಸರಿಸಲಾಗಿದೆ. ಮೋದಿಯವರು ಡಿಸೆಂಬರ್ 25ರಂದು ಪಾಕಿಸ್ತಾನಕ್ಕೆ ದಿಢೀರ್ ಭೇಟಿ ನೀಡಿ ತನ್ನ ಸೋದ್ಯೋಗಿ ನವಾಝ್ ಶರೀಫ್‌ರ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು ಎಂದು ವರದಿಗಳು ತಿಳಿಸಿವೆ.