ಬ್ಯಾರೀಸ್ ಪಬ್ಲಿಕ್ ಸ್ಕೂಲ್‌ನ ವಾರ್ಷಿಕೋತ್ಸವ
ಮಂಗಳೂರು, ಜ.5: ಬ್ಯಾರೀಸ್ ಪಬ್ಲಿಕ್ ಸ್ಕೂಲ್‌ನ ವಾರ್ಷಿಕ ದಿನಾಚರಣೆಯು ಇಂದು ನಗರದ ಪುರಭವನದಲ್ಲಿ ನಡೆಯಿತು.
ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಕರ್ನಾಟಕ ಥಿಯಾಲಾಜಿಕಲ್ ಕಾಲೇಜಿನ ಪ್ರಾಂಶುಪಾಲ ರೆ.ಡಾ. ಹನಿಬಲ್ ರಿಚರ್ಡ್ ಕ್ಯಾಬ್ರಲ್ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಸಲಹೆ ಸೂಚನೆಗಳನ್ನು ನೀಡಿದರು.ಬ್ಯಾರೀಸ್ ಇನ್ಸ್‌ಟಿಟೂಟ್ ಆಫ್ ಟೆಕ್ನಾಲಜಿಯ ಪ್ರಾಂಶುಪಾಲ ಡಾ.ರಾಣಾ ಪ್ರತಾಪ್ ರೆಡ್ಡಿ ಮಾತನಾಡಿ, ಮಕ್ಕಳ ಆಸಕ್ತಿಯ ವಿಷಯಗಳಲ್ಲಿ ಅವರನ್ನು ಪ್ರೋತ್ಸಾಹ ನೀಡುವಂತೆ ಕರೆ ನೀಡಿದರಲ್ಲದೆ, ಇತರ ವಿದ್ಯಾರ್ಥಿಗಳು ಗಳಿಸುವ ರ್ಯಾಂಕ್‌ಗಳೊಂದಿಗೆ ತಮ್ಮ ಮಕ್ಕಳ ಪ್ರತಿಭೆಯನ್ನು ತುಲನೆ ಮಾಡದಂತೆ ಅವರು ಹೆತ್ತವರಿಗೆ ಕಿವಿಮಾತು ಹೇಳಿದರು.
ಬ್ಯಾರೀಸ್ ಅಕಾಡಮಿ ಆಫ್ ಲರ್ನಿಂಗ್‌ನ ಅಧ್ಯಕ್ಷ ಹಾಗೂ ಆಡಳಿತ ಟ್ರಸ್ಟಿ ಸೈಯದ್ ಮುಹಮ್ಮದ್ ಬ್ಯಾರಿ ಅಧ್ಯಕ್ಷತೆ ವಹಿಸಿದ್ದರು.
ಸ್ಕೂಲ್‌ನ ಕರೆಸ್ಪಾಂಡೆಂಟ್ ಮರಿಯಂ ನಾಸಿರ್, ಮೊಂಟೆಸ್ಸರಿ ಟ್ರೈನಿಂಗ್ ಸೆಂಟರ್‌ನ ನಿರ್ದೇಶಕಿ ಜೆಸಿಂತಾ ವಿನ್ಸೆನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಬ್ಯಾರೀಸ್ ಪಬ್ಲಿಕ್ ಸ್ಕೂಲ್‌ನ ಪ್ರಾಂಶುಪಾಲೆ ಗೀತಾ ರೇಗೊ ವಾರ್ಷಿಕ ವರದಿ ವಾಚಿಸಿದರು. ಕಾರ್ಯಕ್ರಮದ ಬಳಿಕ ಬ್ಯಾರೀಸ್ ಸ್ಕೂಲ್‌ನ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಇದೇ ಸಂದರ್ಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಿ ಗೌರವಿಸಲಾಯಿತು.
110ನೆ ವರ್ಷದ ಸಮಾರೋಪಕ್ಕೆ ರಾಷ್ಟ್ರಪತಿ: ಸೈಯದ್ ಬ್ಯಾರಿ
ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ 110ನೆ ವರ್ಷದ ಸಂಭ್ರಮದ ಹಿನ್ನೆಲೆಯಲ್ಲಿ ಮುಂದಿನ ಡಿಸೆಂಬರ್ ತಿಂಗಳಲ್ಲಿ ಸಂಸ್ಥೆಯ ವತಿಯಿಂದ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದ್ದು, ಅಂದಿನ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ಅಥವಾ ಉಪರಾಷ್ಟ್ರಪತಿ ಅವರನ್ನು ಆಹ್ವಾನಿಸಲಾಗುವುದು ಎಂದು ಸೈಯದ್ ಮುಹಮ್ಮದ್ ಬ್ಯಾರಿ ತಿಳಿಸಿದರು.