ಮುಡಿಪುವಿನಲ್ಲಿ ಫಾರ್ಮಾ ಪಾರ್ಕ್: ಸಚಿವ ಖಾದರ್
ಕೊಣಾಜೆ, ಜ.5: ಕುರ್ನಾಡು ವ್ಯಾಪ್ತಿಯ ಮುಡಿಪುವಿನಲ್ಲಿ 170 ಎಕರೆ ಖಾಲಿ ಸರಕಾರಿ ಜಮೀನು ಇದ್ದು, 110 ಎಕರೆಯಲ್ಲಿ ಫಾರ್ಮಾ ಪಾರ್ಕ್ ನಿರ್ಮಾಣಕ್ಕೆ ಈಗಾಗಲೇ ಯೋಜನೆ ರೂಪಿಸ ಲಾಗಿದೆ. ಮುಂದಿನ ವಾರ ದಿಲ್ಲಿಯಲ್ಲಿ ಈ ಸಂಬಂಧ ಕೇಂದ್ರಮಂತ್ರಿ ಅನಂತಕುಮಾರ್ ಹಾಗೂ ಅಧಿಕಾರಿಗಳ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ.
ಈ ಪರಿಸರದಲ್ಲಿ ಎಲ್ಲಾ ಕೈಗಾರಿಕಾ ಕಂಪೆನಿಗಳು ಕಾರ್ಯಾಚರಣೆ ಆರಂಭಿಸಿ ದಲ್ಲಿ, ಸುಮಾರು 3,000 ಮಂದಿಗೆ ಉದ್ಯೋ ಗಾವಕಾಶ ದೊರೆಯಲಿದೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಅಭಿಪ್ರಾಯಪಟ್ಟರು. ಅವರು ಈ ಬಗ್ಗೆ ಮಂಗಳವಾರ ಮುಡಿಪು ವಿನಲ್ಲಿರುವ ಕುರ್ನಾಡ್ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿ ಯಲ್ಲಿ ವಿವರಿಸಿದರು.
ಬಂಟ್ವಾಳ ತಾಲೂಕು ವ್ಯಾಪ್ತಿಯ ಇರಾ ಗ್ರಾಮ ಪ್ರದೇಶವನ್ನು ‘ಕೈಗಾರಿಕಾ ವಲಯ’ ಎಂದು ಈಗಾಗಲೇ ಘೋಷಿಸಲಾಗಿದೆ. ಇದೇ ವೇಳೆ ಕೈಗಾರಿಕೆಗಳಿಂದ ಪರಿಸರ ಮಾಲಿನ್ಯ ತಡೆಯುವ ನಿಟ್ಟಿನಲ್ಲಿ ಫಾರ್ಮಾ ಪಾರ್ಕ್ ನಿರ್ಮಾಣ ಯೋಜನೆಗೆ ಕೇಂದ್ರ ಸರಕಾರ ಒಪ್ಪಿಗೆ ನೀಡಿದೆ. ಅಲ್ಲದೆ 70 ಎಕರೆ ಜಮೀನಿನಲ್ಲಿ ಪ್ಲಾಸ್ಟಿಕ್ ಪಾರ್ಕ್ ನಿರ್ಮಾಣಗೊಳ್ಳಲಿದ್ದು, ಅದಕ್ಕಾಗಿ ಜಮೀನು ಗುರುತಿಸುವಂತೆ ಕೆಐಡಿಬಿಗೆ ಸೂಚಿಸಲಾಗಿದೆ ಎಂದು ಹೇಳಿದರು.
ಕುರ್ನಾಡ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರ ಹಾಸ ಕರ್ಕೇರ, ಪ್ರಧಾನ ಕಾರ್ಯದರ್ಶಿ ಅಬ್ದುಲ್ ಜಲೀಲ್ ಮೊಂಟೆಪದವು, ಜಿಪಂ ಸದಸ್ಯೆ ಮಮತಾ ಡಿ.ಎಸ್. ಗಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷ ನಝರ್ ಶಾ, ಕಾರ್ಯದರ್ಶಿ ಸಮೀರ್ ಪಜೀರ್, ಇರಾ ಗ್ರಾಪಂ ಅಧ್ಯಕ್ಷ ರಝಾಕ್ ಕುಕ್ಕಾಜೆ, ಬಾಳೆಪುಣಿ ಗ್ರಾಪಂ ಅಧ್ಯಕ್ಷೆ ಲೀಲಾವತಿ, ಪಜೀರು ಗ್ರಾಪಂ ಅಧ್ಯಕ್ಷ ಸೀತಾರಾಮ ಶೆಟ್ಟಿ, ನಾಸಿರ್ ನಡುಪದವು ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದರು.