ತಿಪ್ಲೆಪದವು: ಅಪಘಾತದಲ್ಲಿ ನಾಲ್ವರಿಗೆ ಗಾಯ
Update: 2016-01-07 00:02 IST
ಕೊಣಾಜೆ, ಜ.6: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಅಸೈಗೋಳಿ ಸಮೀಪದ ತಿಪ್ಲೆಪದವು ಎಂಬಲ್ಲಿ ಇಂಡಿಕಾ ಕಾರೊಂದು ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮೂವರು ಗಾಯಗೊಂಡು, ಓರ್ವ ಮಹಿಳೆ ಗಂಭೀರ ಗಾಯಗೊಂಡ ಘಟನೆ ಬುಧವಾರ ರಾತ್ರಿ ಸಂಭವಿಸಿದೆ.
ಗಾಯಗೊಂಡವರನ್ನು ಕೊಣಾಜೆ ವರ್ಕಲಗುಡ್ಡೆಯ ಶಿಫಾನ (17), ಶಮೀಮಾ ಬಾನು (38), ಇಶಾನ (18) ಹಾಗೂ ಗಂಭೀರ ಗಾಯಗೊಂಡ ಮಹಿಳೆಯನ್ನು ಮುಮ್ತಾಜ್(45) ಎಂದು ಗುರುತಿಸಲಾಗಿದೆ. ಚಾಲಕ ಅಫ್ರಾನ್ ಎಂಬಾತನಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಇವರಲ್ಲರೂ ಸಂಬಂಧಿಕರಾಗಿದ್ದು ಕೊಣಾಜೆಯಿಂದ ದೇರಳಕಟ್ಟೆಯಲ್ಲಿ ಕಾರ್ಯಕ್ರಮಕ್ಕೆಂದು ಇಂಡಿಕಾ ಕಾರಿನಲ್ಲಿ ತೆರಳುತ್ತಿದ್ದಾಗ ತಿಪ್ಲೆಪದವು ಬಳಿ ಚಾಲಕನ ನಿಯಂತ್ರಣ ತಪ್ಪಿಮರಕ್ಕೆ ಢಿಕ್ಕಿ ಹೊಡೆದಿದೆ.
ಗಾಯಾಳುಗಳು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.