×
Ad

ಮೂಡುಬಿದಿರೆ ಏಕಮುಖ ಸಂಚಾರ ವ್ಯವಸ್ಥೆ ಜಾರಿ

Update: 2016-01-07 00:18 IST

ಮೂಡುಬಿದಿರೆ, ಜ.6: ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ ವಾಹನಗಳ ದಟ್ಟಣೆ ಹೆಚ್ಚಾಗಿದ್ದು, ಇದನ್ನು ನಿಯಂತ್ರಿಸುವ ಉದ್ದೇಶದಿಂದ ಪುರಸಭೆಯು ಪೇಟೆಯ ಪ್ರಮುಖ ಮೂರು ರಸ್ತೆಗಳಲ್ಲಿ ಬುಧವಾರದಿಂದ ಏಕಮುಖ ಸಂಚಾರ ನಿಯಮವನ್ನು ಜಾರಿಗೊಳಿಸಿದೆ. ಈ ಬಗ್ಗೆ ವಾಹನ ಚಾಲಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಂಚಾರಿ ಫಲಕ ಗಳನ್ನು ಅಳವಡಿಸಲಾಗಿದೆ. ಕೃಷ್ಣಕಟ್ಟೆ: 
ಪಟ್ಟಾಡಿ ರಸ್ತೆ, ಹನುಮಂತ ದೇವಸ್ಥಾನ, ಅಮರಶ್ರೀ ಟಾಕೀಸ್ ರಸ್ತೆ, ವಿಜಯಾ ಬ್ಯಾಂಕ್ ಸ್ವರಾಜ್ಯ ಮೈದಾನ ರಸ್ತೆಗಳಲ್ಲಿ ಸಂಚಾರಿ ಫಲಕಗಳನ್ನು ಪೊಲೀಸರ ಸಹಕಾರದೊಂದಿಗೆ ಪೌರ ಕಾರ್ಮಿಕರು ಇಂದು ಅಳವಡಿಸಿದರು. ಪುರಸಭಾಧ್ಯಕ್ಷೆ ರೂಪಾ ಎಸ್.ಶೆಟ್ಟಿ, ಉಪಾಧ್ಯಕ್ಷೆ ಶಕುಂತಳಾ ದೇವಾಡಿಗ, ಸ್ಥಾಯಿ ಸಮಿತಿಯ ಅಧ್ಯಕ್ಷ ಕೊರಗಪ್ಪ, ಮೂಡಾ ಅಧ್ಯಕ್ಷ ಸುರೇಶ ಕೋಟ್ಯಾನ್, ಪುರಸಭಾ ಕಂದಾಯ ಅಧಿಕಾರಿ ಧನಂಜಯ, ಹಿರಿಯ ಆರೋಗ್ಯ ನಿರೀಕ್ಷಕಿ ಇಂದೂ, ಪೊಲೀಸ್ ಅಧಿಕಾರಿಗಳು ಹಾಗೂ ಪುರಸಭಾ ಸದಸ್ಯರು ಉಪಸ್ಥಿತ ರಿದ್ದರು.
 ಮೂಡುಬಿದಿರೆ ಪೇಟೆಯಲ್ಲಿ ಜನದಟ್ಟಣೆ ಹಾಗೂ ವಾಹನಗಳ ಸಂಚಾರವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದನ್ನು ನಿಯಂ ತ್ರಿಸುವ ನಿಟ್ಟಿನಲ್ಲಿ ಏಕಮುಖ ಸಂಚಾರವನ್ನು ಜಾರಿಗೊಳಿಸಲು ಪುರಸಭೆಯು ಕಳೆದ ಕೆಲವು ಸಮಯಗಳ ಹಿಂದೆ ನಿರ್ಣಯ ಮಾಡಿತ್ತು. ಮೊದಲ ಹಂತ ದಲ್ಲಿ ಆಳ್ವಾಸ್ ಆಸ್ಪತ್ರೆ ರಸ್ತೆ ಯಲ್ಲಿ ಪ್ರಾಯೋಗಿಕವಾಗಿ ಆರಂಭಿ ಸಲಾಗಿತ್ತು. ಆದರೆ ನಂತರದ ದಿನಗಳಲ್ಲಿ ಈ ರಸ್ತೆಯ ದುರಸ್ತಿ ಕಾರ್ಯ ಆರಂಭಗೊಂಡಿದ್ದರಿಂದ ದ್ವಿಮುಖದಲ್ಲಿ ವಾಹನಗಳು ಸಂಚರಿಸಲು ಆರಂಭಿಸಿದವು. ರಸ್ತೆ ದುರಸ್ತಿಯ ಬಳಿಕವೂ ಇದು ಹೀಗೆಯೇ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ಇಂದಿನಿಂದ ಜಾರಿಗೆ ಬಂದಿರುವ ಏಕಮುಖ ಸಂಚಾರ ವ್ಯವಸ್ಥೆಯು ಆಳ್ವಾಸ್ ರಸ್ತೆಯಲ್ಲಾದಂತೆ ಆಗದಿರಲು ಪೊಲೀಸರು ಸೂಕ್ತ ರೀತಿಯಲ್ಲಿ ಕ್ರಮ ಕೈಗೊಳ್ಳುವ ಅಗತ್ಯವಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News