‘ಕಯ್ಯರರ ಸಾಹಿತ್ಯ ಮರು ಓದು’ ರಾಷ್ಟ್ರೀಯ ವಿಚಾರ ಸಂಕಿರಣ
Update: 2016-01-07 00:18 IST
ಕಾಸರಗೋಡು, ಜ.6: ‘ಕಯ್ಯರರ ಸಾಹಿತ್ಯ ಮರು ಓದು’ ಎಂಬ ಬಗ್ಗೆ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ ಜ.7 ಮತ್ತು 8ರಂದು ಮಂಜೇಶ್ವರ ಗೋವಿಂದ ಪೈ ಸರಕಾರಿ ಕಾಲೇಜಿನಲ್ಲಿ ನಡೆಯಲಿದೆ.
ಬೆಳಗ್ಗೆ 9 ಗಂಟೆಗೆ ಕಾಲೇಜಿನ ಕನ್ನಡ ವಿಭಾಗದಲ್ಲಿ ನಡೆಯುವ ಕಾರ್ಯಕ್ರಮವನ್ನು ನಿವೃತ್ತ ಪ್ರಾಂಶುಪಾಲ ಡಾ.ಪಿ. ಕೃಷ್ಣ ಭಟ್ ಉದ್ಘಾಟಿಸುವರು. ಗೋವಿಂದ ಪೈ ಕಾಲೇಜಿನ ಪ್ರಾಂಶುಪಾಲ ಡಾ.ಪಿ. ರಾಜೇಂದ್ರನ್ ಅಧ್ಯಕ್ಷತೆ ವಹಿಸುವರು.
9:30ರಿಂದ ವಿವಿಧ ಗೋಷ್ಠಿಗಳು ಆರಂಭಗೊಳ್ಳಲಿವೆ. 8ರಂದು ಸಂಜೆ 4ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಮಂಗಳೂರು ಆಕಾಶವಾಣಿ ಕಾರ್ಯಕ್ರಮ ನಿರ್ವಹಣಾಧಿಕಾರಿ ಡಾ.ಸದಾನಂದ ಪೆರ್ಲ ಭಾಷಣ ಮಾಡುವರು ಎಂದು ಪ್ರಕಟನೆ ತಿಳಿಸಿದೆ.