ಜ.12ರಂದು ಬಂಡವಾಳ ಹೂಡಿಕೆದಾರರ ಸಮಾವೇಶ
ಮಂಗಳೂರು, ಜ.6: ದ.ಕ.ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶಗಳಿದ್ದು, ಇಲ್ಲಿ ಕೈಗಾರಿಕೆ ಸ್ಥಾಪನೆ ಮಾಡಲು ಹಾಗೂ ಆರೋಗ್ಯ ಪ್ರವಾಸೋದ್ಯಮ, ಶೈಕ್ಷಣಿಕ ಪ್ರವಾಸೋ ದ್ಯಮದಲ್ಲಿ ಬಂಡವಾಳ ಹೂಡಲು ಅನುಕೂಲವಾಗುವಂತೆ ಹೂಡಿಕೆದಾರರನ್ನು ಆಕರ್ಷಿಸಲು ಮಂಗಳೂರಿನಲ್ಲಿಜ.12ರಂದು ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ಹಮ್ಮಿಕೊಳ್ಳ ಲಾಗುವುದೆಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಗೋಕುಲ್‌ದಾಸ್ ನಾಯಕ್ ತಿಳಿಸಿದ್ದಾರೆ.
ಅವರು ಇಂದು ತಮ್ಮ ಕಚೇರಿಯಲ್ಲಿ ಈ ಸಂಬಂಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಹೂಡಿಕೆದಾರರ ಸಮಾವೇಶ ಯಶಸ್ಸಿಗೆ ಹಲವಾರು ಸಮಿತಿಗಳನ್ನು ರಚನೆ ಮಾಡಲಾಗಿದೆ. ಹೂಡಿಕೆದಾರರ ಸಮಾ ವೇಶವನ್ನು ಜ.12ರಂದು ಬೆಳಗ್ಗೆ ನಗರದ ಟಿ.ಎಂ.ಎ.ಪೈ ಹಾಲ್‌ನಲ್ಲಿ ಏರ್ಪಡಿಸಲಾಗಿದೆ. ಕೈಗಾರಿಕಾ ಹಾಗೂ ಪ್ರವಾಸೋ ದ್ಯಮ ಸಚಿವ ಆರ್.ವಿ. ದೇಶಪಾಂಡೆ, ದ.ಕ.ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ಕೆನರಾ ಚೇಂಬರ್ ಆಫ್ ಕಾಮರ್ಸ್ ಬಂದರು, ಸಣ್ಣ ಕೈಗಾರಿಕಾ ಸಂಘ ಬೈಕಂಪಾಡಿ, ಕಿರು ಕೈಗಾರಿಕಾ ಸಂಘ ಮುಲ್ಕಿ, ಪ್ಲಾಸ್ಟಿಕ್ ತಯಾರಕರ ಸಂಘ ಬೈಕಂಪಾಡಿ, ಯೆಯ್ಯಿಡಿ ಸಣ್ಣ ಕೈಗಾರಿಕಾ ಸಂಘ ಇತರೆ ಸಂಘ ಸಂಸ್ಥೆಗಳು ಸಮಾವೇಶದಲ್ಲಿ ಭಾಗ ವಹಿಸಲಿದ್ದಾರೆ. ಸುಮಾರು 30ಕ್ಕೂ ಹೆಚ್ಚು ನವ ಹೂಡಿಕೆದಾರರು ಈ ಸಮಾವೇಶದ ಆಕರ್ಷಣೆಯಾಗಿದೆ ಎಂದು ಗೋಕುಲ್‌ದಾಸ್ ಅವರು ತಿಳಿಸಿದರು.