×
Ad

ತೊಕ್ಕೊಟ್ಟು: ಅಲ್ಪಸಂಖ್ಯಾತರಿಗೆ ಸಾಲಸೌಲಭ್ಯ ವಿತರಣೆ

Update: 2016-01-07 00:31 IST

ಉಳ್ಳಾಲ, ಜ.6: ರಾಜ್ಯ ಅಲ್ಪಸಂಖ್ಯಾತ ನಿಗಮದಿಂದ ಕ್ರೈಸ್ತ ಸಮುದಾಯ ಅರ್ಹ ಫಲಾನುಭವಿಗಳಿಗೆ ಸಾಲ ಸೌಲಭ್ಯ ಗಳ ವಿತರಣೆ ಕಾರ್ಯಕ್ರಮ ಮಂಗಳವಾರ ತೊಕ್ಕೊಟ್ಟು ಸಂತ ಸೆಬಾಸ್ಟಿಯನ್ ಚರ್ಚ್ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ 629 ಮಂದಿಗೆ ಶ್ರಮಶಕ್ತಿ ಸಾಲ ಹಾಗೂ 216 ಮಂದಿಗೆ ಕಿರುಸಾಲವನ್ನು ಆರೋಗ್ಯ ಸಚಿವ ಯು.ಟಿ. ಖಾದರ್ ವಿತರಿಸಿದರು. ಬಳಿಕ ಮಾತನಾಡಿದ ಅವರು, ರಾಜ್ಯ ಸರಕಾರ ಸಾಲ ಸೌಲಭ್ಯಕ್ಕೆ ಕಳೆದ ವರ್ಷ ಮಂಗಳೂರು ವಿಧಾನಸಭಾ ಕ್ಷೇತ್ರ ದಿಂದ ಕೆಲವು ಫಲಾನುಭವಿಗಳನ್ನು ಮಾತ್ರ ಆಯ್ಕೆ ಮಾಡಿತ್ತು. ಆದರೆ ಎಲ್ಲರಿಗೂ ಸಾಲ ನೀಡಬೇಕು ಎಂದು ತಾನು ಒತ್ತಾಯಿಸಿದ ಪರಿಣಾಮ ಎಲ್ಲರಿಗೂ ಸಿಗುವಂತಾಗಿ

ೆ ಎಂದರು. ಈ ಸಂದರ್ಭ ಚರ್ಚ್‌ನ ಧರ್ಮಗುರು ಫಾ.ಜೆ.ಬಿ.ಸಲ್ದಾನ, ಉಳ್ಳಾಲ ನಗರಸಭೆ ಉಪಾಧ್ಯಕ್ಷೆ ರಝಿಯಾ ಇಬ್ರಾಹೀಂ, ಕೌನ್ಸಿಲರ್‌ಗಳಾದ ಫಾರೂಕ್ ಉಳ್ಳಾಲ್, ಜಿಪಂ ಸದಸ್ಯ ಎನ್.ಎಸ್.ಕರೀಂ, ತಾಪಂ ಸದಸ್ಯ ಮುಹಮ್ಮದ್ ಮೋನು, ಕಾಂಗ್ರೆಸ್ ಮುಖಂಡ ದಿನೇಶ್ ಕುಂಪಲ, ಉಳ್ಳಾಲ ನಗರಸಭೆ ಮಾಜಿ ಸದಸ್ಯ ಬಾಝಿಲ್ ಡಿಸೋಜ, ಉಸ್ಮಾನ್ ಕಲ್ಲಾಪು ಮತ್ತಿತರರು ಉಪಸ್ಥಿತರಿದ್ದರು. ಎಸ್.ಡಿ.ಸೋಮಪ್ಪ ಸ್ವಾಗತಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News