ನೂತನ ವಿ.ಪ. ಸದಸ್ಯರು ಪ್ರತಿಜ್ಞಾ ವಿಧಿ ಸ್ವೀಕಾರ
Update: 2016-01-06 10:02 IST
ಬೆಂಗಳೂರು, ಜ.6: ವಿಧಾನ ಪರಿಷತ್‌ಗೆ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ಆಯ್ಕೆಯಾದ 24 ಸದಸ್ಯರು ಇಂದು ಪ್ರಮಾಣವಚನ ಸ್ವೀಕರಿಸಿದರು.
ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ ಸಭಾಪತಿ ಡಿ.ಎಚ್.ಶಂಕರಮೂರ್ತಿ ಪ್ರಮಾಣ ವಚನ ಬೋಧಿಸಿದರು.
ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿರುವ ಒಟ್ಟು 25 ಸದಸ್ಯರ ಪೈಕಿ ಚಿತ್ರದುರ್ಗದ ಕಾಂಗ್ರೆಸ್ ಸದಸ್ಯ ರಘ ಆಚಾರ್ ಮಾತ್ರ ಗೈರು ಹಾಜರಾಗಿದ್ದು. ಧನುರ್ಮಾಸದ ಹಿನ್ನೆಲೆಯಲ್ಲಿ ಅವರು ಪ್ರಮಾಣ ವಚನ ಸ್ವೀಕರಿಸಲಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವ ಸಂಪುಟ ಸದಸ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.