×
Ad

ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲೇ ಮಕ್ಕಳಿಗೆ ‘ಶೂ’ ಭಾಗ್ಯ: ಕಿಮ್ಮನೆ

Update: 2016-01-06 23:07 IST

 ಬೆಂಗಳೂರು, ಜ.6: ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲೇ ಸರಕಾರಿ ಹಾಗೂ ಅನುದಾನಿತ ಶಾಲೆಗಳ ಮಕ್ಕಳಿಗೆ ಶೂ(ಬೂಟು) ಹಾಗೂ ಸಾಕ್ಸ್(ಕಾಲು ಚೀಲ) ವಿತರಿಸಲಾಗು ವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ತಿಳಿಸಿದ್ದಾರೆ.
ಬುಧವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ವಾರದೊಳಗೆ ಎಲ್ಲ ಶಾಲಾ ಅಭಿವೃದ್ಧಿ ಸಮಿತಿಗಳಿಗೆ ಶೂ ಹಾಗೂ ಸಾಕ್ಸ್ ಖರೀದಿಗೆ ಅಗತ್ಯವಿರುವ ಹಣವನ್ನು ಬಿಡುಗಡೆ ಮಾಡಲಿದ್ದು, ಮಾರ್ಚ್ ಅಂತ್ಯದ ವೇಳೆಗೆ ಎಲ್ಲ ಮಕ್ಕಳಿಗೂ ಅವುಗಳನ್ನು ವಿತರಣೆ ಮಾಡಲಾಗುವುದು ಎಂದರು.
1-5ನೆ ತರಗತಿಯವರೆಗಿನ ಮಕ್ಕಳಿಗೆ 225 ರೂ., 6-8ನೆ ತರಗತಿಯವರೆಗಿನ ಮಕ್ಕಳಿಗೆ 250 ರೂ., 9-10ನೆ ತರಗತಿಯ ವರೆಗಿನ ಮಕ್ಕಳಿಗೆ 275 ರೂ.ವೆಚ್ಚದಲ್ಲಿ ಶೂ ಹಾಗೂ ಸಾಕ್ಸ್‌ಗಳನ್ನು ಶಾಲಾ ಅಭಿವೃದ್ಧಿ ಸಮಿತಿ ಯವರೇ ಖರೀದಿಸಿ ವಿತರಣೆ ಮಾಡಲಿದ್ದಾರೆ ಎಂದು ಕಿಮ್ಮನೆ ರತ್ನಾಕರ್ ಹೇಳಿದರು.

ಶಾಲಾ ಹಂತದಲ್ಲಿ ಮಕ್ಕಳನ್ನು ಅನು ತ್ತೀರ್ಣಗೊಳಿಸುವ ವ್ಯವಸ್ಥೆಗೆ ವೈಯಕ್ತಿಕ ವಾಗಿ ನನ್ನ ವಿರೋಧವಿದೆ. ಮಕ್ಕಳನ್ನು ಅನುತ್ತೀರ್ಣಗೊಳಿಸುವುದಕ್ಕಿಂತ 7ನೆ ತರಗತಿಯಲ್ಲಿ ಪರೀಕ್ಷೆ ಮಾಡಿ ಅವರು ಎದುರಿಸುತ್ತಿರುವ ಸಮಸ್ಯೆಗಳನ್ನು ಸರಿ ಪಡಿಸಬೇಕು. ನಮ್ಮ ನಿಲುವನ್ನು ಈಗಾ ಗಲೇ ಕೇಂದ್ರ ಸರಕಾರಕ್ಕೆ ತಿಳಿಸಿದ್ದೇವೆ ಎಂದು ಅವರು ತಿಳಿಸಿದರು. ದೇಶವು ಈವರೆಗೆ ಶೇ.74ರಷ್ಟು ಮಾತ್ರ ಸಾಕ್ಷರತೆ ಸಾಧಿಸಿದೆ. ಇನ್ನು ಶೇ.26ರಷ್ಟು ಮಂದಿ ಶಿಕ್ಷಣದಿಂದ ವಂಚಿತರಾಗಿರುವುದು ಅಂಕಿ ಅಂಶಗಳಿಂದ ತಿಳಿದು ಬರುತ್ತದೆ. ಅನುತ್ತೀರ್ಣ ವ್ಯವಸ್ಥೆಯನ್ನು ಮತ್ತೆ ಜಾರಿಗೆ ತರುವುದರಿಂದ ಮಧ್ಯದಲ್ಲೆ ಮಕ್ಕಳು ಶಾಲೆಯನ್ನು ತೊರೆಯುವ ಪ್ರಮಾಣವು ಹೆಚ್ಚಳವಾಗುವ ಆತಂಕವಿದೆ ಎಂದು ಅವರು ಹೇಳಿದರು.
ಪ್ರಸ್ತುತ 6-14 ವರ್ಷದ ವರೆಗಿನ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲಾಗುತ್ತಿದೆ. ಇದನ್ನು 3-16 ಮಾಡಬೇಕು. ಈ ಸಂಬಂಧ ಸಂವಿಧಾನಕ್ಕೆ ಪೂರಕ ತಿದ್ದುಪಡಿ ಯಾಗಬೇಕು. ಸಾಕ್ಷಾರತಾ ಪ್ರಮಾಣವನ್ನು ಶೇ.100ರಷ್ಟು ಸಾಧಿಸಲು ಈ ಕ್ರಮವು ಸಹಕಾರಿಯಾಗಲಿದೆ ಎಂದು ಕಿಮ್ಮನೆ ರತ್ನಾಕರ್ ವಿಶ್ವಾಸ ವ್ಯಕ್ತಪಡಿಸಿದರು.
‘ಶಿಕ್ಷಣ ಹಕ್ಕು ಕಾಯ್ದೆಯಿಂದಾಗಿ ಸರಕಾರಿ ಶಾಲೆಗಳಲ್ಲಿ ಮಕ್ಕಳ ಪ್ರವೇಶ ಪ್ರಮಾಣ ಕುಸಿಯುತ್ತಿದೆ. ಸರಕಾರವೇ ಕೋಟ್ಯಂತರ ರೂ.ಗಳನ್ನು ವೆಚ್ಚ ಮಾಡಿ ಬಡ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುವುದರ ಬದಲು, ಅದೇ ಹಣದಿಂದ ಸರಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸಬೇಕು’ ಎಂದು ಸಾಹಿತಿ ಬರಗೂರು ರಾಮಚಂದ್ರಪ್ಪ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆಂದು ಅವರು ಹೇಳಿದರು.
ರಾಜ್ಯ ಸರಕಾರವು 2009ರಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಒಪ್ಪಿಕೊಂಡಿದೆ. ಶಿಕ್ಷಣ ಹಕ್ಕು ಕಾಯ್ದೆಯು ಕೇಂದ್ರ ಸರಕಾರದ ಯೋಜನೆಯಾಗಿದ್ದು, ಈ ಸಂಬಂಧ ಅವರೇ ತೀರ್ಮಾನ ಕೈಗೊಳ್ಳಬೇಕು. ಶಿಕ್ಷಣ ಹಕ್ಕು ಕಾಯ್ದೆಯನ್ವಯ ರಾಜ್ಯ ಸರಕಾರ ವಾರ್ಷಿಕ 1400 ಕೋಟಿ ರೂ.ಗಳನ್ನು ಖರ್ಚು ಮಾಡುತ್ತಿದೆ ಎಂದು ಅವರು ತಿಳಿಸಿದರು.
 ಶಿಕ್ಷಣ ಹಕ್ಕು ಕಾಯ್ದೆಯಡಿ ಮಕ್ಕಳಿಗೆ ಪ್ರವೇಶ ಕಲ್ಪಿಸಲು ಬಿಪಿಎಲ್ ಕಾರ್ಡ್ ಕಡ್ಡಾಯ ಮಾಡುವುದರಿಂದ ನೈಜ್ಯ ಫಲಾ ನುಭವಿಗಳಿಗೆ ಇದರ ಸದುಪಯೋಗವಾಗ ಲಿದೆ. ರಾಜ್ಯ ಸರಕಾರವು ಈ ಸಂಬಂಧ ಗಂಭೀರವಾಗಿ ಚಿಂತನೆ ನಡೆಸಿದೆ. ಸುಳ್ಳು ಮಾಹಿತಿ ನೀಡಿ ಆರ್‌ಟಿಇ ಅಡಿಯಲ್ಲಿ ಸೀಟು ಪಡೆದಿದ್ದರೆ ಅಂತಹ ಮಕ್ಕಳ ಪೋಷಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದು ಕಿಮ್ಮನೆ ರತ್ನಾಕರ್ ಹೇಳಿದರು.
ನೇಮಕಾತಿ ನಿಯಮಾವಳಿ ರದ್ದು: ರಾಜ್ಯ ಸರಕಾರವು 12 ಸಾವಿರ ಮಂದಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ರಚಿಸಿದ್ದ ನಿಯಮಾವಳಿಗಳನ್ನು ಹೈಕೋರ್ಟ್ ರದ್ದು ಮಾಡಿದೆ. ಇದರಿಂದಾಗಿ, ಹೊಸದಾಗಿ ನಿಯಮಾವಳಿಗಳನ್ನು ರಚನೆ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಅವರು ತಿಳಿಸಿದರು.
ಅಡ್ವೊಕೇಟ್ ಜನರಲ್ ಹಾಗೂ ಕಾನೂನು ಇಲಾಖೆಯಿಂದ ಸಲಹೆಗಳನ್ನು ಕೋರಲಾಗಿದೆ. ಅಲ್ಲದೆ, ಸುಮಾರು 900 ಆಕ್ಷೇಪಣೆಗಳು ಈ ಸಂಬಂಧ ಸಲ್ಲಿಕೆಯಾಗಿದ್ದು, ಅವುಗಳನ್ನು ಅಧ್ಯಯನ ಮಾಡಿ ಸೂಕ್ತವಾದ ನಿಯಮಾವಳಿಗಳನ್ನು ರಚನೆ ಮಾಡಲಾಗುವುದು ಎಂದು ಕಿಮ್ಮನೆ ರತ್ನಾಕರ್ ಹೇಳಿದರು.
ಈ ಸಂದರ್ಭದಲ್ಲಿ ನೂತನ ವಿಧಾನ ಪರಿಷತ್ ಸದಸ್ಯ ಪ್ರಸನ್ನಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News