×
Ad

ಗೋವಿಂದೇಗೌಡ ನಿಧನಕ್ಕೆ ಗಣ್ಯರ ಸಂತಾಪ

Update: 2016-01-06 23:15 IST

ಬೆಂಗಳೂರು, ಜ. 6: ಮಲೆನಾಡ ಗಾಂಧಿ ಎಂದೇ ಜನಪ್ರಿಯರಾಗಿದ್ದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹಾಗೂ ಮಾಜಿ ಸಚಿವ ಎಚ್.ಜಿ.ಗೋವಿಂದೇಗೌಡ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಕಿಮ್ಮನೆ ರತ್ನಾಕರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿದ್ದ ಎಚ್.ಜಿ.ಗೋವಿಂದೇಗೌಡ ಅವರು ತಮ್ಮ ಅಧಿಕಾರಾವಧಿಯಲ್ಲಿ 1ಲಕ್ಷಕ್ಕೂ ಹೆಚ್ಚು ಶಿಕ್ಷಕರನ್ನು ಪ್ರತಿಭೆಯ ಆಧಾರದ ಮೇರೆಗೆ ಅತ್ಯಂತ ಪ್ರಾಮಾಣಿಕವಾಗಿ ಹಾಗೂ ಪಾರದರ್ಶಕವಾಗಿ ನೇಮಕ ಮಾಡಿ, ಶಿಕ್ಷಣ ರಂಗದಲ್ಲಿ ಕ್ರಾಂತಿಯನ್ನು ಉಂಟು ಮಾಡಿದ್ದರು.

ಅಲ್ಲದೆ, ಸರಕಾರಿ ಸೇವೆಗೆ ನೇಮಕಗೊಂಡ ಈ ಎಲ್ಲ್ಲ ಶಿಕ್ಷಕರನ್ನು ಗ್ರಾಮೀಣ ಸೇವೆಗೆ ಕಡ್ಡಾಯವಾಗಿ ನಿಯುಕ್ತಿಗೊಳಿಸುವಲ್ಲಿ ಯಶಸ್ವಿಯಾಗಿದ್ದರು. ಶಿಕ್ಷಕರ ಸಮಸ್ಯೆಗಳಿಗೆ ಜಿಲ್ಲಾ ಮಟ್ಟದಲ್ಲೇ ಪರಿಹಾರ ದೊರಕಿಸಿಕೊಡುವಲ್ಲಿ ಹೊಸ ಸೂತ್ರ ರೂಪಿಸಿದ್ದರು. ಗೋವಿಂದೇಗೌಡ ಸರಳ, ಸಜ್ಜನ ಹಾಗೂ ಸಂಭಾವಿತ ರಾಜಕಾರಣಿ ಎಂದು ಸಿದ್ದರಾಮಯ್ಯ ಬಣ್ಣಿಸಿದ್ದಾರೆ. ನಮ್ಮನ್ನಗಲಿರುವ ಹಿರಿಯ ಚೇತನ ಗೋವಿಂದೇಗೌಡ ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಹಾಗೂ ಅಗಲಿಕೆಯಿಂದ ಉಂಟಾದ ದುಃಖವನ್ನು ಭರಿಸಲು ಅವರ ಕುಟುಂಬದ ಸದಸ್ಯರು ಮತ್ತು ಅಪಾರ ಅಭಿಮಾನಿ ವರ್ಗಕ್ಕೆ ಶಕ್ತಿಯನ್ನು ಕರುಣಿಸಲಿ ಎಂದು ಭಗವಂತನಲ್ಲಿ ಸಿದ್ದರಾಮಯ್ಯ ಪ್ರಾರ್ಥಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News