×
Ad

ಕೇರಳ ಪೊಲೀಸರಿಂದ ಯುವತಿಯ ಮೇಲೆ ಅತ್ಯಾಚಾರ ಆರೋಪ

Update: 2016-01-07 10:21 IST

ಲೇಡಿಗೋಶನ್ ಆಸ್ಪತ್ರೆಗೆ ದಾಖಲಾಗಿದ್ದ ಯುವತಿ ಪರಾರಿ?
ಪುತ್ತೂರು, ಜ. 7: ತನ್ನ ಮೇಲೆ ಕೇರಳ ಪೊಲೀಸರು ಸಾಮೂಹಿಕ ಅತ್ಯಾಚಾರ ನಡೆಸಿರುವುದಾಗಿ ಯುವತಿಯೊಬ್ಬಳು ಆರೋಪಿಸಿದ್ದಾಳೆ.

ಯುವತಿ ಹರಿಯಾಣ ಮೂಲದವಳಾಗಿದ್ದು, ಕೇರಳದ ಪಯ್ಯನ್ನೂರಿನ ಅನಾಥಾಶ್ರಮವೊಂದರಲ್ಲಿ ವಾಸಿಸುತ್ತಿದ್ದಳು.
ಈಕೆ ಬುಧವಾರ ತಡರಾತ್ರಿ ಪುತ್ತೂರಿನ ಹಾರಾಡಿ ರೈಲ್ವೆ ಸೇತುವೆ ಬಳಿ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಪ್ರಜ್ಞಾಶೂನ್ಯ ಸ್ಥಿತಿಯಲ್ಲಿದ್ದ ಯುವತಿಯನ್ನು ಸ್ಥಳೀಯರು ಪುತ್ತೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಈ ವೇಳೆ ವೈದ್ಯರು ತಪಾಸಣೆಗೆ ಮುಂದಾದಾಗ, ತನ್ನ ಮೇಲೆ ಕೇರಳ ಪೊಲೀಸರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಹೇಳಿದ್ದಾಳೆ.

ಈ ಹಿನ್ನೆಲೆಯಲ್ಲಿ ಯುವತಿಯನ್ನು ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅಲ್ಲಿಯೂ ಯುವತಿ ಚಿಕಿತ್ಸೆ ಪಡೆಯಲು ನಿರಾಕರಿಸಿದ್ದಾಳೆ. ಮಾನಸಿಕ ಖಿನ್ನತೆಗೆ ಒಳಗಾಗಿರುವ ಆಕೆ ಬಳಿಕ ಆಸ್ಪತ್ರೆಯಿಂದ ಪರಾರಿಯಾಗಿದ್ದಾಳೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಮಂಗಳೂರಿನ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವತಿಯ ಮೇಲೆ ಚಲಿಸುವ ರೈಲಿನಲ್ಲಿ ಸಾಮೂಹಿಕ ಅತ್ಯಾಚಾರ ನಡೆದಿದೆಯೋ ಅಥವಾ ಆಶ್ರಮದಲ್ಲಿ ಅತ್ಯಾಚಾರ ಎಸಗಲಾಗಿದೆಯೋ ಎಂಬುದು ನಿಗೂಢವಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News