ಮೆಹಬೂಬಾ ಮುಫ್ತಿ ಕಾಶ್ಮೀರದ ಮುಂದಿನ ಸಿಎಂ
ಹೊಸದಿಲ್ಲಿ, ಜ.7: ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಯಾಗಿ ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ನೇಮಕಗೊಳ್ಳಲಿದ್ದಾರೆ.
ಮುಖ್ಯಮಂತ್ರಿ ಹಾಗೂ ಮೆಹಬೂಬಾ ಅವರ ತಂದೆ ಮುಫ್ತಿ ಮುಹಮ್ಮದ್ ಸಯೀದ್ ಗುರುವಾರ ನಿಧನರಾಗಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಮುಖ್ಯ ಮಂತ್ರಿ ಹುದ್ದೆಗೆ ಮೆಹಬುಬಾ ಮುಫ್ತಿ ನೇಮಕಗೊಳ್ಳುವುದು ಖಚಿತವಾಗಿದೆ.
ಮೆಹಬೂಬಾ ಮುಫ್ತಿ ಅವರನ್ನು ಮುಖ್ಯಮಂತ್ರಿ ಹುದ್ದೆಯಲ್ಲಿ ಕುಳ್ಳಿರಿಸಲು ಮೈತ್ರಿ ಪಕ್ಷ ಬಿಜೆಪಿ ಒಲವು ವ್ಯಕ್ತಪಡಿಸಿದೆ ಎಂದು ತಿಳಿದು ಬಂದಿದೆ.
56ರ ಹರೆಯದ ಮೆಹಬೂಬಾ ಮೊದಲ ಮುಸ್ಲಿಂ ಮಹಿಳಾ ಮುಖ್ಯಮಂತ್ರಿ ಎನಿಸಿಕೊಳ್ಳಲಿದ್ದಾರೆ.ಮೆಹಬೂಬಾ 1996ರಲ್ಲಿ ಮೊದಲ ಬಾರಿ ಕಾಂಗ್ರೆಸ್‌ನಿಂದ ಸ್ಫರ್ಧಿಸಿ ಶಾಸಕಿಯಾಗಿ ವಿಧಾನಸಭೆ ಪ್ರವೇಶಿಸಿದ್ದರು.ಬಳಿಕ ತಂದೆಯೊಂದಿಗೆ ಕಾಂಗ್ರೆಸ್‌ನಿಂದ ಹೊರಬಂದು ಜಮ್ಮು ಮತ್ತು ಕಾಶ್ಮೀರ ಪೀಪಲ್ಸ್ ಡೆಮಾಕ್ರಿಕೆಟ್ ಪಾರ್ಟಿ(ಪಿಡಿಪಿ) ಕಟ್ಟಿದ್ದರು.ಪ್ರಸ್ತುತ ಅವರು ಲೋಕಸಭಾ ಸದಸ್ಯರಾಗಿದ್ದಾರೆ. 2014ರಲ್ಲಿ ಅನಂತನಾಗ್ ಕ್ಷೇತ್ರದಿಂದ ಆಯ್ಕೆಯಾಗಿದ್ದರು.