×
Ad

ಕುವೆಂಪು ರಚಿತ ಭಾಷಾ ಸಂಧಾನ ಕೃತಿ ಲೋಕಾರ್ಪಣೆ

Update: 2016-01-07 23:18 IST

ಬೆಂಗಳೂರು, ಜ.7: ಕನ್ನಡ ಮಾಧ್ಯಮದಲ್ಲಿ ಎಸೆಸೆಲ್ಸಿ ಮತ್ತು ಪಿಯುಸಿಯನ್ನು ವ್ಯಾಸಂಗ ಮಾಡಿ, ಅತಿ ಹೆಚ್ಚು ಅಂಕಗಳಿಸಿ ತೇರ್ಗಡೆಯಾದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕನ್ನಡ ಮಾಧ್ಯಮ ಪ್ರಶಸ್ತಿಯನ್ನು ಕಳೆದ ಆರು ವರ್ಷಗಳಿಂದ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಪ್ರದಾನ ಮಾಡುತ್ತಿದೆ.


ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಿ, ಕನ್ನಡ ಮಾಧ್ಯಮ ಶಿಕ್ಷಣವನ್ನು ಉತ್ತೇಜಿಸುವ ಉದ್ದೇಶದ ಹಿನ್ನೆಲೆಯಲ್ಲಿ ‘ಬೆಂಗಳೂರು ವಿಭಾಗ ಕನ್ನಡ ಮಾಧ್ಯಮ ಪ್ರಶಸ್ತಿ’ ಪ್ರದಾನ ಕಾರ್ಯಕ್ರಮವನ್ನು ಜ.8ರಂದು ಬೆಳಗ್ಗೆ 10.30ಕ್ಕೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಲಾಗಿದೆ. ಇದೇ ಸಂದರ್ಭದಲ್ಲಿ ಕುವೆಂಪು ರಚಿತ ಭಾಷಾ ಸಂಧಾನ ಪುಸ್ತಕವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಲಿದ್ದಾರೆ.ನ್ನಡ ಮಾಧ್ಯಮ ಪ್ರಶಸ್ತಿಯನ್ನು ರಾಜ್ಯದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಎಸೆಸೆಲ್ಸಿಯ 1,091 ವಿದ್ಯಾರ್ಥಿಗಳು ಮತ್ತು ಪಿಯುಸಿಯ 920 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 2011 ವಿದ್ಯಾರ್ಥಿಗಳಿಗೆ ನೀಡಿ ಗೌರವಿಸಿ, ಪುರಸ್ಕರಿಸಲಾಗುತ್ತಿದೆ. ಮುಖ್ಯಮಂತ್ರಿಯ ಆಶಯದಂತೆ ಈ ಸಾಲಿನಿಂದ ಪ್ರತಿ ತಾಲೂಕಿನಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಐವರು ಪ್ರತಿಭಾವಂತ ವಿದ್ಯಾಥಿಗಳಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News