ಅಲ್ಪಸಂಖ್ಯಾತರಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡಲು ಮನವಿ
Update: 2016-01-07 23:23 IST
ಬೆಂಗಳೂರು, ಜ.7: ಮುಂಬರುವ ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಅಲ್ಪಸಂಖ್ಯಾತ ಸಮುದಾಯದವರಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡುವಂತೆ ಕೋರಿ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಿಗೆ ಸಚಿವ ಆರ್. ರೋಷನ್‌ಬೇಗ್ ಪತ್ರ ಬರೆದಿದ್ದಾರೆ.
ಹಿಂದಿನ ವಿಧಾನಸಭಾ ಚುನಾವಣೆ ಸೇರಿದಂತೆ ಇತ್ತೀಚೆಗೆ ನಡೆದ ಎಲ್ಲ ಚುನಾವಣೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯವು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ, ಅನೇಕ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ್ದಾರೆ. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ತಮಗೆ ಹೆಚ್ಚಿನ ಪ್ರಾತಿನಿಧ್ಯ ಸಿಗಲಿದೆ ಎಂದು ಅಪೇಕ್ಷೆ ಹೊಂದಿದ್ದಾರೆ.
ಆದುದರಿಂದ, ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡುವಂತೆ ರಾಜ್ಯದ ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರಿಗೆ ನಿರ್ದೇಶನ ನೀಡಬೇಕು ಎಂದು ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಿಗೆ ರೋಷನ್‌ಬೇಗ್ ಮನವಿ ಮಾಡಿದ್ದಾರೆ.