×
Ad

ಇಂದು ಬ್ಯಾಂಕ್ ನೌಕರರ ಮುಷ್ಕರ

Update: 2016-01-07 23:24 IST

ಬೆಂಗಳೂರು, ಜ.7: ಭಾರತೀಯ ಸ್ಟೇಟ್ ಬ್ಯಾಂಕ್‌ನ ದ್ವಿಪಕ್ಷೀಯ ಒಪ್ಪಂದಕ್ಕೆ ವಿರುದ್ಧವಾಗಿ ನೌಕರರ ಸೇವಾ ನಿಯಮಗಳನ್ನು ಏಕಪಕ್ಷೀಯವಾಗಿ ಜಾರಿಗೊಳಿಸುತ್ತಿರುವುದನ್ನು ವಿರೋಧಿಸಿ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ ಜ.8ರಂದು ಮುಷ್ಕರಕ್ಕೆ ಕರೆ ನೀಡಿದೆ ಎಂದು ಸಂಘದ ಉಪಾಧ್ಯಕ್ಷ ಎನ್. ವೇಣುಗೋಪಾಲ್ ತಿಳಿಸಿದ್ದಾರೆ.
    ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2015 ಮೇ ತಿಂಗಳಲ್ಲಿ ನಡೆದ ಸಭೆಯಲ್ಲಿ ಭಾರತೀಯ ಬ್ಯಾಂಕುಗಳ ಸಂಘದ ವ್ಯವಸ್ಥಾಪಕ ಮಂಡಳಿ ಮತ್ತು ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ ಪ್ರತಿನಿಧಿಗಳು ಸಾಮಾನ್ಯ ಒಪ್ಪಂದಕ್ಕೆ ಸಹಿ ಮಾಡಿದ್ದೆವು. ಅದರ ಪ್ರಕಾರ ನೌಕರರ ಹುದ್ದೆಗಳಿಗನುಸಾರವಾಗಿ ನಿಯಮಗಳನ್ನು ಮತ್ತು ವೇತನಗಳನ್ನು ನಿರ್ಧರಿಸಬೇಕಾಗಿತ್ತು. ಆದರೆ ಭಾರತೀಯ ಸ್ಟೇಟ್ ಬ್ಯಾಂಕ್ ನೌಕರರ ಜೊತೆ ಆಂತರಿಕ ಒಪ್ಪಂದ ಮಾಡಿಕೊಂಡು ಇತರೆ ಬ್ಯಾಂಕುಗಳ ನೌಕರರಿಗೆ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿದರು.
  ಸಾರ್ವಜನಿಕ ವಲಯದ ಬ್ಯಾಂಕು, ಹಳೆ ತಲೆಮಾರಿನ ಬ್ಯಾಂಕು ಮತ್ತು ಕೆಲವು ವಿದೇಶಿ ಬ್ಯಾಂಕುಗಳಲ್ಲಿ ಕೆಲಸ ಮಾಡುತ್ತಿರುವ ನೌಕರರು ಸ್ಟೇಟ್ ಬ್ಯಾಂಕಿನ ನೀತಿಯನ್ನು ವಿರೋಧಿಸಿ ಈ ಮುಷ್ಕರದಲ್ಲಿ ಭಾಗವಹಿಸುತ್ತಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಬ್ಯಾಂಕ್ ನೌಕರರು ಪಾಲ್ಗೊಂಡು ಬೆಂಬಲಿಸಬೇಕೆಂದು ಮತ್ತು ಸಾರ್ವಜನಿಕರು ಸಹಕರಿಸಬೇಕೆಂದು ಮನವಿ ಮಾಡಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News