ನಾಳೆ ಉಚಿತ ದಂತ ಭಾಗ್ಯ ಕಾರ್ಯಕ್ರಮ
Update: 2016-01-07 23:30 IST
ಬೆಂಗಳೂರು, ಜ. 7: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಜ. 8 ರಂದು ರಾಜ್ಯದ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ನಗರದ ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದಂತ ಭಾಗ್ಯ ಯೋಜನೆಯ ಸದಸ್ಯೆ ಡಾ.ನಾಗಲಕ್ಷ್ಮಿಚೌಧರಿ, ಸರಕಾರದ ಸಹಕಾರದೊಂದಿಗೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಒಂದು ದಿನದ ಉಚಿತ ದಂತ ಚಿಕಿತ್ಸಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ತಪಾಸಣೆಯ ನಂತರ ನಾಗರಿಕರಿಗೆ ಉಚಿತ ದಂತ ಪಂಕ್ತಿಗಳನ್ನು ನೀಡಲಾಗುವುದು ಎಂದು ತಿಳಿಸಿದರು. ತ ಶಿಬಿರದಲ್ಲಿ ಪಾಲ್ಗೊಳ್ಳುವವರು 60ವರ್ಷ ಮೇಲ್ಪಟ್ಟವರಾಗಿರಬೇಕು ಮತ್ತು ಬಿಪಿಎಲ್ ಕಾರ್ಡ್ ಹೊಂದಿರಬೇಕು ಎಂದು ಡಾ. ಆಶಾ ಮನವಿ ಮಾಡಿಕೊಂಡರು.