ನಾಳೆ ಪುತ್ತೂರು ನೂತನ ಬಸ್ ನಿಲ್ದಾಣ ಉದ್ಘಾಟನೆ
ಮಂಗಳೂರು, ಜ.7: ಕೆಎಸ್ಸಾರ್ಟಿಸಿ ಪುತ್ತೂರು ವಿಭಾಗದ ವ್ಯಾಪ್ತಿ ಗೊಳಪಟ್ಟ ಪುತ್ತೂರು ನೂತನ ಬಸ್ ನಿಲ್ದಾಣ, ವಿಭಾಗೀಯ ಕಚೇರಿ ಹಾಗೂ ವಿಭಾಗೀಯ ಕಾರ್ಯಾಗಾರದ ಉದ್ಘಾಟನಾ ಸಮಾರಂಭವು ಜ.9ರಂದು ಪೂರ್ವಾಹ್ನ 11ಕ್ಕೆ ಪುತ್ತೂರು ಹೊಸ ಬಸ್ ನಿಲ್ದಾಣದಲ್ಲಿ ನಡಯಲಿದೆ.
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನೂತನ ಬಸ್ ನಿಲ್ದಾಣ ಉದ್ಘಾಟಿ ಸುವರು. ಶಾಸಕಿ ಶಕುಂತಳಾ ಟಿ.ಶೆಟ್ಟಿ ಸಮಾರಂಭದ ಅಧ್ಯಕ್ಷತೆ ವಹಿಸ ಲಿದ್ದು, ಅರಣ್ಯ ಸಚಿವ ಬಿ.ರಮಾನಾಥ ರೈ ಜ್ಯೋತಿ ಬೆಳಗಿಸುವರು. ಸಮಾರಂಭದಲ್ಲಿ ಸಚಿವರಾದ ಯು.ಟಿ. ಖಾದರ್, ವಿನಯಕುಮಾರ್ ಸೊರಕೆ, ಸಚಿವ ಕೆ.ಅಭಯಚಂದ್ರ, ಸಂಸದ ನಳಿನ್ ಕುಮಾರ್ ಕಟೀಲ್ ಭಾಗವಹಿಸುವರು. ಸಮಾರಂಭದಲ್ಲಿ ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಇ.ವಿ.ರಮಣ ರೆಡ್ಡಿ, ಜಿಲ್ಲಾಧಿಕಾರಿ ಎ.ಬಿ.ಇಬ್ರಾಹೀಂ, ಹಿಂದೂಸ್ಥಾನ್ ಡೆವಲಪರ್ಸ್ ವ್ಯವಸ್ಥಾಪಕ ನಿರ್ದೇಶಕ ಡಾ. ಮುಹಮ್ಮದ್ ಇಬ್ರಾಹೀಂ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಪುತ್ತೂರು ಕೆಎಸ್ಸಾರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟನೆ ತಿಳಿಸಿದೆ.