ಜ.10: ಅನಾಥಾಶ್ರಮ ಮಕ್ಕಳ ಒಲಿಂಪಿಕ್ಸ್ ಕ್ರೀಡಾ ಕೂಟ
Update: 2016-01-08 00:22 IST
ಮಂಗಳೂರು, ಜ.7: ರೋಟರಿ ಕ್ಲಬ್ ಆ್ ಮಂಗಳೂರು ಸೆಂಟ್ರಲ್ ಮತ್ತು ರೋಟರ್ಯಾಕ್ಟ್ ಕ್ಲಬ್ ಮಂಗಳೂರು ಸಿಟಿ ಸಂಸ್ಥೆಯವರ ಸಂಯುಕ್ತ ಆಶ್ರಯದಲ್ಲಿ 17ನೇ ವಾರ್ಷಿಕ ರೋಟರಿ ಅನಾಥಾಶ್ರಮ ಮಕ್ಕಳ ಒಲಿಂಪಿಕ್ಸ್ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧಾಕೂಟ ಜ.10ರಂದು ಬೆಳಗ್ಗೆ 9ಕ್ಕೆ ನಗರದ ಉರ್ವ ಕೆನರಾ ಪ್ರೌಢಶಾಲೆ ಆವರಣದಲ್ಲಿ ನಡೆಯಲಿದೆ.
ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ರೋಟರಿ ಸಭಾಪತಿ ಡಾ.ಬಿ.ದೇವದಾಸ ರೈ, ಜಿಲ್ಲೆಯ ಸುಮಾರು 10 ಅನಾಥಾಶ್ರಮದ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣೆ ಸಂಜೆ 5ಕ್ಕೆ ನಡೆಯಲಿದೆ ಎಂದವರು ತಿಳಿಸಿದರು. ರೋಟರಿ ಕ್ಲಬ್ ಅಧ್ಯಕ್ಷ ಎಲಿಯಾಸ್ ಸಾಂಕ್ಟಿಸ್, ರೋಟರ್ಯಾಕ್ಟ್ ಕ್ಲಬ್ ಅಧ್ಯಕ್ಷ ರಾಜೇಶ್ ದೇವಾಡಿಗ ಉಪಸ್ಥಿತರಿದ್ದರು.