×
Ad

ಆರೋಪಿಗಳಿಗೆ ಸುಪ್ರೀಂಕೋರ್ಟಿನಿಂದ ಜಾಮೀನು ನಿರಾಕರಣೆ

Update: 2016-01-08 22:32 IST

ನವದೆಹಲಿ, ಜ.8: ಲೋಕಾಯುಕ್ತದಲ್ಲಿನ ಭ್ರಷ್ಟಾಚಾರ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಶ್ರೀನಿವಾಸಗೌಡ, ವಿ. ಭಾಸ್ಕರ್‌ರಾವ್, ರಿಯಾಝ್ ಅಹ್ಮದ್, ಶಂಕರೇಗೌಡರಿಗೆ ಜಾಮೀನು ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ.
ಲೋಕಾಯುಕ್ತದಲ್ಲಿ ನಡೆದ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಎಸ್‌ಐಟಿಯಿಂದ ಬಂಧಿತರಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಈ ನಾಲ್ವರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಾ ಧೀಶರು, ಜಾಮೀನು ಕೊಡಲು ನಿರಾಕರಿಸಿ ವಿಚಾರಣೆಯನ್ನು 10 ವಾರಗಳ ಕಾಲ ಮುಂದೂಡಿದ್ದಾರೆ. ಲೋಕಾಯುಕ್ತದಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಈ ನಾಲ್ವರಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿ ಬಿಡುಗಡೆ ದಿನಾಂಕವನ್ನು ನಿಗದಿ ಮಾಡಿತ್ತು. ಇದನ್ನು ಆಕ್ಷೇಪಿಸಿ ಲೋಕಾಯುಕ್ತ ಪೊಲೀಸರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.
ಲೋಕಾಯುಕ್ತ ಪೊಲೀಸರ ಮನವಿಯನ್ನು ಮಾನ್ಯ ಮಾಡಿದ್ದ ಸುಪ್ರೀಂಕೋರ್ಟ್ ಜಾಮೀನು ನಿರಾಕರಿಸಿತ್ತು. ಮತ್ತೆ ಈ ನಾಲ್ವರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ವಿಚಾರಣಾ ಸಂದರ್ಭದಲ್ಲಿ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ತಂಡ, ತನಿಖೆಯ ಪ್ರಗತಿಯ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಿತ್ತು.
ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ, ಪ್ರಕರಣದ ವಿಚಾರಣೆಯನ್ನು 10 ವಾರಗಳ ಕಾಲ ಮುಂದೂಡಿ 6 ವಾರ ದೊಳಗೆ ತನಿಖಾ ವರದಿಯನ್ನು ಸಲ್ಲಿಸುವಂತೆ ಎಸ್‌ಐಟಿಗೆ ಗಡುವು ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News