ಅಪರಿಚಿತ ಮೃತ್ಯು
Update: 2016-01-09 00:06 IST
ಉಡುಪಿ, ಜ.8: ಇಲ್ಲಿನ ಸರ್ವಿಸ್ ಬಸ್‌ನಿಲ್ದಾಣದಲ್ಲಿ ಗುರುವಾರ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರನ್ನು ಅಜ್ಜರಕಾಡು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.