ಮಧ್ಯರಾತ್ರಿವರೆಗೂ ಬಾರ್-ರೆಸ್ಟೋರೆಂಟ್‌ಗಳಿಗೆ ಅವಕಾಶ; ಶೀಘ್ರದಲ್ಲೇ ಅಧಿಕಾರಿಗಳ ಸಭೆ: ಜಿ.ಪರಮೇಶ್ವರ್
ಬೆಂಗಳೂರು,ಜ.9: ನಗರದಲ್ಲಿನ ಬಾರ್ ಮತ್ತು ರೆಸ್ಟೋರೆಂಟ್‌ಗಳನ್ನು ಮಧ್ಯರಾತ್ರಿವರೆಗೂ ತೆರೆಯಲು ಅನುಮತಿಯ ನ್ನು ಪರಿಷ್ಕರಿಸಲು ಶೀಘ್ರದಲ್ಲೇ ಅಬ ಕಾರಿ, ಸಾರಿಗೆ ಮತ್ತು ಪೊಲೀಸ್ ಅಧಿಕಾ ರಿಗಳ ಸಭೆ ನಡೆಸಿ ಸೂಕ್ತ ನಿರ್ಧಾರ ಕೈಗೊ ಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಶನಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕ್ರಿಸ್‌ಮಸ್ ಹಾಗೂ ನೂತನ ವರ್ಷಾಚರಣೆ ಸಂದರ್ಭದಲ್ಲಿ ಮಧ್ಯರಾತ್ರಿವರೆಗೂ ಬಾರ್ ಆಂಡ್ ರೆಸ್ಟೋರೆಂಟ್‌ಗಳನ್ನು ಅವಧಿ ವಿಸ್ತರಿಸಬೇಕೆಂಬ ಬೇಡಿಕೆ ಹಿನ್ನೆಲೆಯಲ್ಲಿ ಅನುಮತಿ ನೀಡಲಾಗಿತ್ತು. ಇದೀಗ ಅವಧಿ ವಿಸ್ತರಣೆ ಸಂಬಂಧ ಹಲವು ಸಮಸ್ಯೆಗಳು ಎದುರಾಗಿದ್ದು, ಈ ಸಂಬಂಧ ಅಬಕಾರಿ, ಸಾರಿಗೆ ಮತ್ತು ಪೊಲೀಸ್ ಅಧಿಕಾರಿಗಳ ಸಭೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೆಲ್ಮೆಟ್ ಕಡ್ಡಾಯ ನಿಯಮಾವಳಿಯನ್ನು ಸಾರಿಗೆ ಇಲಾಖೆ ರೂಪಿಸಿದೆ. ಪೊಲೀಸ್ ಇಲಾಖೆ ಹೆಲ್ಮೆಟ್ ಕಡ್ಡಾಯ ಅನುಷ್ಠಾನಕ್ಕೆ ಕ್ರಮ ವಹಿಸಲಿದ್ದು, ಯಾವ ಕಂಪೆನಿಯ ಹೆಲ್ಮೆಟ್ ಧರಿಸಬೇಕು ಎಂಬ ಬಗ್ಗೆ ಸಾರಿಗೆ ಇಲಾಖೆ ಗಮನ ಹರಿಸಬೇಕೆಂದು ಸಚಿವ ಪರಮೇಶ್ವರ್ ಅವರ ಹೇಳಿದರು.
ಮುಖ್ಯಮಂತ್ರಿ ಮತ್ತು ಗೃಹ ಸಚಿವರನ್ನು ಹೊರತುಪಡಿಸಿ ಎಲ್ಲ ಸಚಿವರು, ಸಂಸದರು, ಶಾಸಕರು ಸಂಚಾರ ನಿಯಮಗಳನ್ನು ಪಾಲಿಸಬೇಕು ಎಂದ ಅವರು, ಸಾರಿಗೆ ನಿಯಮಾವಳಿಗಳು ಎಲ್ಲರಿಗೂ ಒಂದೇ ಎಂದ ಅವರು, ಇಲಾಖೆ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.