ರಾಜ್ಯಕ್ಕೆ 1,540 ಕೋಟಿ ರೂ. ಮಂಜೂರು: ಯಡಿಯೂರಪ್ಪ
Update: 2016-01-09 23:10 IST
ಬೆಂಗಳೂರು, ಜ.8: ರಾಜ್ಯದಲ್ಲಿನ ಬರ ಪರಿಹಾರ ಕಾಮಗಾರಿಗಳಿಗಾಗಿ ರಾಜ್ಯ ಸರಕಾರದ ಮನವಿಗೆ ಸ್ಪಂದಿಸಿ ಕೇಂದ್ರ ಸರಕಾರವು 1,540 ಕೋಟಿ ರೂ.ಅನುದಾನ ಮಂಜೂರು ಮಾಡಿದೆ ಎಂದು ಸಂಸದ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಇತ್ತೀಚೆಗೆ ಪ್ರಧಾನಮಂತ್ರಿ ಮೈಸೂರಿಗೆ ಬಂದಿದ್ದಾಗ ರಾಜ್ಯದ ಬರ ಪರಿಸ್ಥಿತಿಯ ಬಗ್ಗೆ ಅವರಿಗೆ ಮನವರಿಕೆ ಮಾಡಿ ರಾಜ್ಯಕ್ಕೆ ಮಂಜೂರಾದ 1,540 ಕೋಟಿ ರೂ.ಗಳನ್ನು ಕೂಡಲೇ ಬಿಡುಗಡೆ ಮಾಡುವಂತೆ ವಿನಂತಿಸಲಾಗಿತ್ತು ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಕೇಂದ್ರ ಸರಕಾರ ಮಂಜೂರು ಮಾಡಿರುವ ಹಣದಿಂದ ಬರ ಪರಿಹಾರ ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಲಿ ಎಂದು ಅವರು ಹೇಳಿದ್ದಾರೆ.