×
Ad

ಇಂದಿನಿಂದ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್

Update: 2016-01-10 00:35 IST

ಮಂಗಳೂರು, ಜ.9: ನಗರದ ಶ್ರೀ ಪತಂಜಲಿ ಯೋಗ ಶಿಕ್ಷಣ ಪ್ರತಿಷ್ಠಾನ ಹಾಗೂ ಇತರ ಯೋಗ ಸಂಸ್ಥೆಗಳು ಮತ್ತು ಆಸಕ್ತರ ಸಹಯೋಗದೊಂದಿಗೆ ಮೂಡುಬಿದಿರೆಯ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್‌ನಲ್ಲಿ ಜ.10ರಿಂದ 14ರವರೆಗೆ ರಾಷ್ಟ್ರಮಟ್ಟದ ಯೋಗ ಕ್ರೀಡಾ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಪತಂಜಲಿ ಯೋಗ ಪ್ರತಿಷ್ಠಾನದ ಅಧ್ಯಕ್ಷ ಕೆ.ನಾರಾಯಣ ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಕಾರ್ಯಕ್ರಮವನ್ನು ಅಪರಾಹ್ನ 3ಕ್ಕೆ ಮೂಡುಬಿದಿರೆಯ ಜೈನ ಮಠದ ಶ್ರೀ ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿ ಉಪಸ್ಥಿತಿಯಲ್ಲಿ ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ಉದ್ಘಾಟಿಸಲಿದ್ದಾರೆ. ಕ್ರೀಡಾ ಸಚಿವ ಅಭಯಚಂದ್ರ ಜೈನ್ ಅಧ್ಯಕ್ಷತೆ ವಹಿಸುವರು. ಕಾರ್ಯಕ್ರಮದ ಸಮಾರೋಪವು ಜ.14ರಂದು ಪೂರ್ವಾಹ್ನ 11ಕ್ಕೆ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ವೈಎಫ್‌ಐನ ಉಪಾಧ್ಯಕ್ಷ ಗಂಗಾಧರಪ್ಪ, ಯೋಗ ಶಿಕ್ಷಕಿ ಸುನೀತಾ ಶರ್ಮಾ, ಯೋಗ ಪ್ರೋತ್ಸಾಹಕಿ ಶಾಂತಾ ಬೆಂಗಳೂರು, ದೇವಿಕಾ ಪುರುಷೋತ್ತಮ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News