×
Ad

ಬೆಂಗಳೂರಿನಲ್ಲಿ ಬಿಜೆಪಿ ಶಾಸಕಾಂಗ ಸಭೆ; ಪರಿಷತ್‌ ಚುನಾವಣಾ ಸೋಲಿನ ಪರಾಮರ್ಶೆ

Update: 2016-01-10 11:48 IST

ಬೆಂಗಳೂರು, ಜ.10: ಬೆಂಗಳೂರಿನ ಮಲ್ಲೇಶ್ವರಮ್‌ನಲ್ಲಿರುವ ಬಿಜೆಪಿ  ಕಚೇರಿಯಲ್ಲಿ ಇಂದು   ರಾಜ್ಯ ಬಿಜೆಪಿ ಶಾಸಕಾಂಗ . ಸಭೆಯಲ್ಲಿ ಕಳೆದ ವಿಧಾನ ಪರಿಷತ್‌ ಚುನಾವಣೆಯಲ್ಲಿ ಪಕ್ಷಕ್ಕೆ ಆಗಿರುವ ಹೀನಾಯ  ಸೋಲಿನ ಬಗ್ಗೆ ಪರಾಮರ್ಶೆ ನಡೆಯಿತು.
ಮುಂಬರುವ ಜಿಲ್ಲಾಪಂಚಾಯತ್‌ ಮತ್ತು ತಾಲೂಕು ಪಂಚಾಯತ್‌ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಯಿತು. ಸಭೆಯಲ್ಲಿ ಪಕ್ಷದ ರಾಜ್ಯ ಅಧ್ಯಕ್ಷರ ಬದಲಾವಣೆಯ ಬಗ್ಗೆ ಯಾವುದೇ ಚಚೆ ನಡೆಯಲಿಲ್ಲ.
ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್‌ ಜೋಶಿ, ಕೇಂದ್ರ ಸಚಿವರಾದ ಡಿ.ವಿ.ಸದಾನಂದ ಗೌಡ, ಅನಂತ ಕುಮಾರ‍್, ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ರಾಜ್ಯ ಬಿಜೆಪಿ ಧುರೀಣರು, ಸಂಸದರು, ಶಾಸಕರು ಮತ್ತಿತರರು ಈ ಸಭೆಯಲ್ಲಿ ಭಾಗವಹಿಸಿದ್ದಾರೆ.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News