ವಾರದೊಳಗೆ ಮೆಹಬೂಬ ಮುಫ್ತಿ ಮುಖ್ಯಮಂತ್ರಿಯಾಗಿ ಪ್ರಮಾಣ
Update: 2016-01-10 17:29 IST
ಶ್ರೀನಗರ, ಜ.10: ಒಂದು ವಾರದೊಳಗಾಗಿ ಪಿಡಿಪಿ ಅಧ್ಯಕ್ಷೆ ಮೆಹಬೂಬ ಮುಫ್ತಿ ಜಮ್ಮು ಮತ್ತು ಕಾಶ್ಮೀರದ ಮುಖ್ಯ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಮುಖ್ಯಮಂತ್ರಿಯಾಗಿದ್ದ ಮುಫ್ತಿ ಮುಹಮ್ಮದ್ ಸಯೀದ್ ನಿಧನದ ಬಳಿಕ ಮುಖ್ಯಮಂತ್ರಿ ಹುದ್ದೆ ತೆರವಾಗಿದ್ದು,ಮುಫ್ತಿ ಪುತ್ರಿ ಮೆಹಬೂಬ ಮುಫ್ತಿ ಅವರು ಮುಖ್ಯಮಂತ್ರಿ ಹುದ್ದೆಯನ್ನು ತಕ್ಷಣ ಸ್ವೀಕರಿಸಲು ಸಿದ್ದರಿಲ್ಲ ಈ ಕಾರಣದಿಂದಾಗಿ ರಾಜ್ಯದಲ್ಲಿ ರಾಜ್ಯಪಾಲರ ಆಳ್ವಿಕೆ ಜಾರಿಯಾಗಿದೆ.
ಮೆಹಬೂಬ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಕನಿಷ್ಠ ಒಂದು ವಾರದ ಕಾಲಾವಕಾಶ ಕೇಳಿರುವುದಾಗಿ ಪಿಡಿಪಿ ಮೂಲಗಳು ತಿಳಿಸಿವೆ.
ರಾಜ್ಯಪಾಲರ ಆಳ್ವಿಕೆ ಜಾರಿಗೊಳಿಸುವ ಬಗ್ಗೆ ಕೇಂದ್ರ ಗೃಹ ಸಚಿವಾಲಯ ಕಳುಹಿಸಿದ ಪ್ರಸ್ತಾವನೆಗೆ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅಂಕಿತ ಹಾಕಿದ್ದಾರೆ.