ಮತದಾರರ ಅಂತಿಮ ಪಟ್ಟಿ ಪ್ರಕಟ
Update: 2016-01-11 00:32 IST
ಉಡುಪಿ, ಜ.10: 2016 ಜ.1ನ್ನು ಅರ್ಹತಾ ದಿನವನ್ನಾಗಿಟ್ಟುಕೊಂಡು ಸಿದ್ದಪಡಿಸಲಾದ ಉಡುಪಿ ಜಿಲ್ಲೆಯ ಬೈಂದೂರು, ಕುಂದಾಪುರ, ಉಡುಪಿ, ಕಾಪು, ಕಾರ್ಕಳ ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಜ.11ರಂದು ಆಯಾ ಮತಗಟ್ಟೆಗಳಲ್ಲಿ, ಆಯಾ ತಹಶೀಲ್ದಾರ್ ಕಚೇರಿಗಳಲ್ಲಿ, ಸಹಾಯಕ ಕಮಿಷನರ್ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗುವುದು. ಹೊಸದಾಗಿ ನೋಂದಾಯಿತರಾದ ಮತದಾರರಿಗೆ ಎಪಿಕ್ ಕಾರ್ಡ್‌ಗಳನ್ನು ಅವರವರ ಕ್ಷೇತ್ರದ ಬಿಎಲ್‌ಓಗಳ ಮೂಲಕ ವಿತರಣೆ ಮಾಡಲಾಗುತ್ತದೆ. ಯುವ ಮತದಾರರಿಗೆ (ಅಂದರೆ 18ರಿಂದ 21 ವಯಸ್ಸಿನ) ಎಪಿಕ್ ಕಾರ್ಡ್ ಗಳನ್ನು ಜ.25ರಂದು ನಡೆಯುವ ರಾಷ್ಟ್ರಿಯ ಮತದಾರರ ದಿನಾಚರಣೆಯ ದಿನದಂದು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ವಿಶಾಲ್ ಆರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.