ಬೈಕ್‌ನಿಂದ ಬಿದ್ದು ಚಿತ್ರದ ನಿರ್ದೇಶಕ ಸಂದೀಪ್ ಸಾವು
Update: 2016-01-11 10:15 IST
ಬೆಂಗಳೂರು, ಜ.11: ಬೆಂಗಳೂರು ವಿವಿ ಆವರಣದಲ್ಲಿ ಇಂದು ಬೆಳಗ್ಗೆ ಬೈಕ್‌ನಿಂದ ಕೆಳಗೆ ಬಿದ್ದು ಸಂಭವಿಸಿದ ಅಪಘಾತದಲ್ಲಿ ಬಿಸಿಲೆ ಚಿತ್ರದ ನಿರ್ದೇಶಕ ಸಂದೀಪ್ ಗೌಡ (38 ) ಮೃತಪಟ್ಟಿದ್ದಾರೆ.
ಸಂದೀಪ್ ಚಿತ್ರವೊಂದರ ಚಿತ್ರೀಕರಣಕ್ಕಾಗಿ ಬೆಂಗಳೂರು ವಿಶ್ವವಿದ್ಯಾಲಯದ ಬಳಿಯ ರಸ್ತೆಯಲ್ಲಿ ತೆರಳುತ್ತಿದ್ದಾಗ ಆಕಸ್ಮಿಕವಾಗಿ ಬೈಕ್ ಸ್ಕಿಡ್ ಆಗಿ ಸಂದೀಪ್ ಬೈಕ್‌ನಿಂದ ಆಯತಪ್ಪಿ ಕೆಳಗೆ ಬಿದ್ದರು. . ಗಂಭೀರ ಗಾಯಗೊಂಡ ಸಂದೀಪ್‌ರನ್ನು . ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಅಲ್ಲಿ ಕೊನೆಯುಸಿರೆಳೆದರು ಎಂದು ತಿಳಿದು ಬಂದಿದೆ.
ಸಂದೀಪ್ ಅವರು ಬೆಂಗಳೂರಿನ ರಾಜರಾಜೇಶ್ವರಿ ನಗರದ ಬೆಮೆಲ್ ಬಡಾವಣೆಯ ನಿವಾಸಿಯಾಗಿದ್ದು, ಈ ಹಿಂದೆ ನಟ ದಿಗಂತ್ ಅವರೊಂದಿಗೆ ಬಿಸಿಲೆ ಎಂಬ ಚಿತ್ರವನ್ನು ನಿರ್ದೇಶಿಸಿದ್ದರು.
ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.