ಫರಂಗಿಪೇಟೆ: ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದ ಕಾರು
Update: 2016-01-12 10:09 IST
ಫರಂಗಿಪೇಟೆ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ವಿಭಜಕದ ಮೇಲೇರಿದ ಘಟನೆ ಮಂಗಳವಾರ ಬೆಳ್ಳಗೆ 9:45 ರ ವೇಳೆಗೆ ಬಂಟ್ವಾಳ ತಾಲೂಕಿನ ಫರಂಗಿಪೇಟೆ ಸಮೀಪದ ಹತ್ತನೇಮೈಲುಗಲ್ಲು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಫರಂಗಿಪೇಟೆ ನಿವಾಸಿ ರಝಾಕ್ ಎಂಬವರ ಮಗ ನೌಫಲ್ ಎಂಬಾತ ಕಾರು ಚಲಾಯಿಸಿಕೊಂಡು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ನೌಫಲ್ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.