ದ.ಕ. ಜಿಲ್ಲಾ ಬಂಡವಾಳ ಹೂಡಿಕೆದಾರರ ಸಮಾವೇಶ ಉದ್ಘಾಟನೆ
ಮಂಗಳೂರು: ನಗರದ ಟಿ.ಎಂ.ಎ. ಪೈ ಕನ್ವೆನ್ ಶನ್ ಸೆಂಟರ್ ನಲ್ಲಿ ಇಂದು ದ.ಕ.ಜಿಲ್ಲಾ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ಜಿಲ್ಲಾ ಉಸ್ತುವಾರಿ ಸಚಿವ. ರಮಾನಾಥ ರೈ ಉದ್ಘಾಟಿಸಿದರು.
ಸಮಾವೇಶದಲ್ಲಿ ಜಿಲ್ಲೆಯ ೩೨ಕ್ಕೂ ಅಧಿಕ ವಿವಿಧ ಕಂಪನಿಗಳು ಬಂಡವಾಳ ಹೂಡಿಕೆಗೆ ಮುಂದಾಗಿವೆ.
ಉದ್ಘಾಟನೆ ನೆರವೇರಿಸಿ ಮಾತನಾಡಿದ ಸಚಿವ ರಮಾನಾಥ ರೈ, ಜಿಲ್ಲೆಯಲ್ಲಿ ಹೂಡಿಕೆಯನ್ನು ಮುಕ್ತ ಮನಸ್ಸಿನಿಂದ ಸ್ವಾಗತಿಸುವ ಮತ್ತು ಉದ್ದಿಮೆಗೆ ಅನುಕೂಲಕರ ವಾತಾವರಣ ಇದೆ ಎಂದರು.
ಸಮಾರಂಭದಲ್ಲಿ ಮೇಯರ್ ಜೆಸಿಂತಾ ವಿಜಯ್ ಆಲ್ಫ್ರೆಡ್, ಶಾಸಕ ಮೊಯ್ದಿನ್ ಬಾವಾ, ದ.ಕ.ಜಿ.ಪಂ. ಅಧ್ಯಕ್ಷರು ಆಶಾ ತಿಮ್ಮಪ್ಪ ಗೌಡ, ಮೂಡಾ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್, ಉಪ ಮೇಯರ್ ಪುರುಷೋತ್ತಮ ಚಿತ್ರಾಪುರ, ಜಿಲ್ಲಾಧಿಕಾರಿ ಎ.ಬಿ. ಇಬ್ರಾಹೀಂ, ಜಿ.ಪಂ.ಸಿಇಒ ಶ್ರೀವಿದ್ಯಾ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಭರತ್ ಲಾಲ್ ಮೀನಾ, ಕೆಸಿಸಿಐ ಅಧ್ಯಕ್ಷ. ರಾಮ್ ಮೋಹನ್ ಪೈ ಮಾರೂರು, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿದೇಶಕ ಗೋಕುಲ್ ದಾಸ್ ನಾಯಕ್ ಉಪಸ್ಥಿತರಿದ್ದರು.