ಮಂಗಳೂರು ವಿವಿ: ಜ.12ರಿಂದ 18ರ ವರೆಗೆ ರಾಷ್ಟ್ರೀಯ ಯುವ ದಿನಾಚರಣೆ
Update: 2016-01-12 12:14 IST
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ, ವಿಶ್ವವಿದ್ಯಾನಿಲಯ ಕಾಲೇಜು ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ ಜನ್ಮದಿಂದ ಪ್ರಯುಕ್ತ ಇಂದಿನಿಂದ ಜ.18ರವರೆಗೆ ಆಯೋಜಿಸಲಾದ ರಾಷ್ಟ್ರೀಯ ಯುವ ದಿನಾಚರಣೆಯನ್ನು ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಕೆ.ಭೈರಪ್ಪ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಪುತ್ತೂರು ವಿವೇಕಾನಂದ ಮಹಾವಿದ್ಯಾನಿಲಯದ ನಿವೃತ್ತ ಪ್ರಾಂಶುಪಾಲ ಡಾ.ಮಾಧವ ಭಟ್ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಎ.ಉದಯ್ ಕುಮಾರ್, ವಿದ್ಯಾರ್ಥಿ ಸಂಘದ ಉಪನಿರ್ದೇಶಕ ಡಾ.ಎ ಹರೀಶ್, ವಿದ್ಯಾರ್ಥಿ ಮುಖಂಡರುಗಳಾದ ಸೀತಾರಶ್ಮಿ ಎಮ್, ನವೀನ್ ಸಪಲ್ಯ,ಲತೇಶ್, ನಿತೀಶ್ ಕುಮಾರ್, ಸುಪ್ರೀತಾ ಸಿ ಉಪಸ್ಥಿತರಿದ್ದರು.ನಾಗಪ್ಪ ಆರ್ ಗೌಡ ಕಾರ್ಯಕ್ರಮ ನಿರೂಪಿಸಿದರು