ಬೆಳಗಾವಿ ಗಡಿ ವಿವಾದ ಮೇಲ್ವಿಚಾರಣೆ; ಉಸ್ತುವಾರಿ ಸಚಿವರನ್ನಾಗಿ ಎಚ್.ಕೆ.ಪಾಟೀಲ್ ನೇಮಕ
Update: 2016-01-12 22:41 IST
ಬೆಂಗಳೂರು, ಜ.12: ಬೆಳಗಾವಿ ಗಡಿ ವಿವಾದದ ವಿಷಯಗಳಿಗೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಎಚ್.ಕೆ.ಪಾಟೀಲ್‌ರನ್ನು ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.
ಕಳೆದ ಡಿ.20ರಂದು ಮುಖ್ಯಮಂತ್ರಿ ಬೆಳಗಾವಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯ ಮುಖಂಡರು, ಗಡಿ ವಿವಾದದ ವಿಷಯಗಳಿಗೆ ಸಂಬಂಧಿಸಿದಂತೆ ಎಚ್.ಕೆ.ಪಾಟೀಲ್‌ರನ್ನು ಉಸ್ತುವಾರಿಯನ್ನಾಗಿ ನೇಮಕ ಮಾಡುವಂತೆ ಮನವಿ ಸಲ್ಲಿಸಿದ್ದರು.
ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಇತ್ತೀಚೆಗಷ್ಟೇ ತನ್ನ ಸಂಪುಟದ ಹಿರಿಯ ಸಚಿವ ಚಂದ್ರಕಾಂತ ಪಾಟೀಲ್‌ರನ್ನು ಗಡಿಗೆ ಸಂಬಂಧಿಸಿದ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.