ಚೆನ್ನೈ ಪ್ರವಾಸಕ್ಕೆ ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ನೀರು ಪಾಲು
ತುಮಕೂರು, ಜ.12: ಪ್ರವಾಸಕ್ಕೆಂದು ತೆರಳಿದ್ದ ನಗರದ ಸಿದ್ದಗಂಗಾ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಬ್ಬರು ಚನ್ನೈನ ಸಮುದ್ರದ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ಮಂಗಳವಾರ ನಡೆದಿದೆ.
ಮೃತ ವಿದ್ಯಾರ್ಥಿಗಳನ್ನು ಎಸ್‌ಐಟಿ ಕಾಲೇಜಿನ ವಿದ್ಯಾರ್ಥಿಗಳಾದ ಬೆಂಗಳೂರಿನ ಜೋಶುವ ಆಕಾಶ್ ಮತ್ತು ಎಚ್.ಎಸ್.ಸುಮನ್ ಎಂದು ಗುರುತಿಸಲಾಗಿದೆ.
ಸಿದ್ದಗಂಗಾ ತಾಂತ್ರಿಕ ಮಹಾವಿದ್ಯಾಲಯದ ವಾಸ್ತುಶಿಲ್ಪ ವಿಭಾಗದಲ್ಲಿ 6ನೆ ಸೆಮಿಸ್ಟರ್ ವಿದ್ಯಾರ್ಥಿಗಳು ಕಾಲೇಜಿನ ವತಿಯಿಂದ ಪ್ರವಾಸ ತೆರಳಿದ್ದರು. ಈ ವೇಳೆಯಲ್ಲಿ ಚನ್ನೈನ ಬೀಚ್‌ನಲ್ಲಿ ನಾಲ್ವರು ವಿದ್ಯಾರ್ಥಿಗಳು ಆಡುವಾಗ ಸಮುದ್ರದ ಅಲೆಗಳು ವೇಗವಾಗಿ ಬಂದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಕೊಚ್ಚಿ ಹೋದರು ಎನ್ನಲಾಗಿದೆ. ಅದರಲ್ಲಿ ಇಬ್ಬರು ವಿದ್ಯಾರ್ಥಿಗಳು ಅದೃಷ್ಟವಶಾತ್ ಬದುಕಿ ಬಂದಿದ್ದಾರೆ ಎನ್ನಲಾಗಿದೆ.
ಉಳಿದಂತೆ ನೀರಿನಲ್ಲಿ ಕೊಚ್ಚಿ ಹೋಗಿದ್ದ ಎಸ್‌ಐಟಿ ಕಾಲೇಜಿನ ವಿದ್ಯಾರ್ಥಿ ಜೋಶುವ ಆಕಾಶ್ ಮತ್ತು ವಿದ್ಯಾರ್ಥಿನಿ ಎಚ್.ಎಸ್.ಸುಮನ್ ಅಲೆಗಳ ರಭಸಕ್ಕೆ ಸಿಲುಕಿ ಮೃತಪಟ್ಟಿದ್ದಾರೆ.