×
Ad

10 ನೆ ದಿನಕ್ಕೆ ಕಾಲಿಟ್ಟ ಪ್ರತಿಭಟನೆ

Update: 2016-01-12 23:46 IST

ಶಾಲಾ ಕಾಲೇಜುಗಳಿಗೆ ಅನುದಾನ ನೀಡಲು ಒತ್ತಾಯ ಬೆಂಗಳೂರು, ಜ. 12: ಅನುದಾನರಹಿತ ಕನ್ನಡ ಮಾಧ್ಯಮ ಶಾಲಾ ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸಿ, ಶಾಲಾ ಮಕ್ಕಳಿಗೆ ಸರಕಾರದ ಸೌಲಭ್ಯ ಮತ್ತು ಶಿಕ್ಷಕರಿಗೆ ವೇತನವನ್ನು ನೀಡಬೇಕು ಎಂದು ಕರ್ನಾಟಕ ರಾಜ್ಯ ಅನುದಾನರಹಿತ ಶಾಲಾ ಕಾಲೇಜುಗಳ ಆಡಳಿತ ಮಂಡಳಿ ಮತ್ತು ನೌಕರರ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಕೆ.ಜೆ. ಜಯದೇವ ಗಾಂಧಿ ಒತ್ತಾಯಿಸಿದ್ದಾರೆ.

ಮಂಗಳವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 1995ರ ನಂತರದ ಅನುದಾನರಹಿತ ಶಾಲಾ ಕಾಲೇಜುಗಳಿಗೆ ಅನುದಾನ ವಿಸ್ತರಣೆ ಮಾಡುವ ವಿಚಾರದಲ್ಲಿ ಸರಕಾರ ಮಲತಾಯಿ ಧೋರಣೆ ತಾಳುತ್ತಿದೆ. ಈ ವಿಚಾರವಾಗಿ ಜ.4 ರಿಂದ ಸ್ವಾತಂತ್ರ ಉದ್ಯಾನದಲ್ಲಿ ಅನಿರ್ದಿಷ್ಟ ಧರಣಿ ಹಮ್ಮಿಕೊಂಡಿದ್ದೇವೆ, ಆದರೆ ಧರಣಿ ಆರಂಭಿಸಿ 9 ದಿನಗಳೇ ಕಳೆದರೂ, ಶಿಕ್ಷಣ ಇಲಾಖೆಗೆ ಸಂಬಂಧಪಟ್ಟ ಸಚಿವರು, ಅಧಿಕಾರಿಗಳು ಇದುವರೆಗೂ ಸ್ಥಳಕ್ಕೆ ಭೇಟಿ ನೀಡಿಲ್ಲ ಎಂದು ಅಸಮಾದಾನ ವ್ಯಕ್ತಪಡಿಸಿದರು.ರ ನಂತರ ಪ್ರಾರಂಭವಾದ ಶಾಲಾ ಕಾಲೇಜುಗಳಿಗೆ ಅನುದಾನ ವಿಸ್ತರಿಸಬೇಕು, ಸರಕಾರಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ನೀಡುವ ಬಿಸಿಯೂಟ ಯೋಜನೆ ಸೇರಿದಂತೆ ಇತರೆ ಸೌಲಭ್ಯಗಳನ್ನು ಅನುದಾನರಹಿತ ಶಾಲಾ ಕಾಲೇಜು ಮಕ್ಕಳಿಗೂ ನೀಡಬೇಕು ಎಂದು ಬೇಡಿಕೆಯಿಟ್ಟರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News