ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ
ನಗರದ ಬೌರಿಂಗ್ ಆಸ್ಪತ್ರೆಯಲ್ಲಿರುವ ಮಕ್ಕಳ ತುರ್ತು ಚಿಕಿತ್ಸಾ ಘಟಕದಲ್ಲಿ ಅತ್ಯುತ್ತಮ ಸೌಲಭ್ಯಗಳನ್ನು ಕಲ್ಪಿಸಲಾಗಿದ್ದು, ಬಡವರು ಹಾಗೂ ಮಧ್ಯಮ ವರ್ಗದ ಜನ ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಮೂಲಸೌಲಭ್ಯ ಅಭಿವೃದ್ಧಿ, ವಾರ್ತಾ ಮತ್ತು ಹಜ್ ಸಚಿವ ಆರ್.ರೋಷನ್‌ಬೇಗ್ ಕರೆ ನೀಡಿದ್ದಾರೆ.
ಮಂಗಳವಾರ ಬೌರಿಂಗ್ ಆಸ್ಪತ್ರೆಯಲ್ಲಿ ಜೈನ್ ಮಹಿಳಾ ಮಂಡಳಿ ವತಿಯಿಂದ ಸ್ಥಾಪಿಸಿರುವ ಶುದ್ಧ ಕುಡಿಯುವ ನೀರಿನ ಎರಡು ಘಟಕಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಯಾವ ಖಾಸಗಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಳಿಗೆ ಕಡಿಮೆ ಇಲ್ಲದಂತೆ ಬೌರಿಂಗ್ ಆಸ್ಪತ್ರೆಯಲ್ಲಿ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದರು.್ನ ಸಮಸ್ಯೆ ಸೇರಿದಂತೆ ಹಲವು ಮಾರಕ ಕಾಯಿಲೆಗಳಿಂದ ಬಳಲುತ್ತಿರುವ ಬಡ ರೋಗಿಗಳಿಗೆ ಸರಕಾರ ಉಚಿತ ಚಿಕಿತ್ಸೆ ನೀಡುತ್ತಿದೆ. ಬಿಪಿಎಲ್ ಕಾರ್ಡ್ ಸೌಲಭ್ಯ ಇಲ್ಲದಿರುವ ಬಡ ರೋಗಿಗಳ ಚಿಕಿತ್ಸಾ ಸೌಲಭ್ಯಕ್ಕೆ ಜೈನ್ ಮಹಿಳಾ ಮಂಡಳಿ ನೆರವಿನ ಹಸ್ತ ಚಾಚಬೇಕು ಎಂದು ಅವರು ಮನವಿ ಮಾಡಿದರು.
ಬೌರಿಂಗ್ ಆಸ್ಪತ್ರೆ ಅಧೀಕ್ಷಕ ಮಂಜುನಾಥ್, ಜೈನ್ ಮಹಿಳಾ ಮಂಡಳಿಯ ಕೌಶಲ್ಯಾ ಜೈನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.