×
Ad

ಮರಳುಗಾರಿಕೆಯ ವಾಹನಗಳು ವಶಕ್ಕೆ

Update: 2016-01-13 00:06 IST

ಕುಂದಾಪುರ, ಜ.12: ತಾಲೂಕಿನ ಕಾವ್ರಾಡಿ ಗ್ರಾಮದ ಕಂಡ್ಲೂರು ಸಮೀಪ ವಾರಾಹಿ ಹೊಳೆಯ ಸರ್ವೆ ನಂ.157 ಸರಕಾರಿ ಜಾಗದಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದ್ದ ಜಾಗಕ್ಕೆ ಜಿಲ್ಲಾ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿ ಡಾ.ಮಹದೇಶ್ವರ ಎಚ್.ಎಸ್.ನೇತೃತ್ವದಲ್ಲಿ ದಾಳಿ ನಡೆಯಿತು.

ಅಧಿಕಾರಿಗಳು ಮರಳು ಸಾಗಾಟಕ್ಕೆ ಬಳಸುತ್ತಿದ್ದ ಎರಡು ಟಿಪ್ಪರ್ ಹಾಗೂ ಇತರ ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಟಿಪ್ಪರ್ ಚಾಲಕರು ಓಡಿಹೋಗಿ ತಪ್ಪಿಸಿ ಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News