×
Ad

ಜುಗಾರಿ ಅಡ್ಡೆಗೆ ದಾಳಿ: ಆರು ಮಂದಿ ಸೆರೆ

Update: 2016-01-13 00:07 IST

ಬಂಟ್ವಾಳ, ಜ. 12: ತಾಲೂಕಿನ ವಾಮದಪದವು ಸಮೀಪದ ಅಜ್ಜಿಬೆಟ್ಟು ಗ್ರಾಮದ ಕೊರಗಟ್ಟೆೆ ಎಂಬಲ್ಲಿ ಸೋಮವಾರ ತಡರಾತ್ರಿ ನಡೆಯುತ್ತಿದ್ದ ಜುಗಾರಿ ಅಡ್ಡೆಗೆ ಪೂಂಜಾಲಕಟ್ಟೆ ಠಾಣಾಧಿಕಾರಿ ಲತೇಶ್ ಕುಮಾರ್ ನೇತೃತ್ವದ ಪೊಲೀಸರು ದಾಳಿ ನಡೆಸಿ ಆರು ಮಂದಿಯನ್ನು ಬಂಧಿಸಿದ್ದಾರೆ.

 ಬಂಧಿತರನ್ನು ಸ್ಥಳೀಯ ನಿವಾಸಿಗಳಾದ ಹರೀಶ್, ಜಯರಾಮ್, ಚಂದ್ರಹಾಸ, ಅಣ್ಣು, ಓಬಯ್ಯ, ಕೇಶವ ಎಂದು ಗುರುತಿಸಲಾಗಿದೆ. ಇವರು ಮನೆಯೊಂದರಲ್ಲಿ ನಡೆಯುತ್ತಿದ್ದ ಯಕ್ಷಗಾನ ಬಯಲಾಟ ಸಂದರ್ಭದಲ್ಲಿ ಜುಗಾರಿ ಆಟದಲ್ಲಿ ನಿರತರಾಗಿದ್ದರು. ಆರೋಪಿಗಳಿಂದ 1,700 ರೂ. ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News