ವಿವೇಕಾನಂದರಿಂದ ಸೂರ್ತಿ ಪಡೆಯಿರಿ: ಉಡುಪಿ ಸಿಇಒ ಕರೆ
ಉಡುಪಿ, ಜ.12: ದೇಶದ ಯುವ ಜನತೆ ಸ್ವಾಮಿ ವಿವೇಕಾನಂದರ ಆದರ್ಶ, ಸಂದೇಶಗಳಿಂದ ಸೂರ್ತಿ ಪಡೆಯಬೇಕು ಎಂದು ಉಡುಪಿ ಜಿಪಂ ಸಿಇಒ ಪ್ರಿಯಾಂಕಾ ಮೇರಿ ್ರಾನ್ಸಿಸ್ ಹೇಳಿದ್ದಾರೆ.
ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ವಿವಿಧ ಕಾಲೇಜು ಹಾಗೂ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಸ್ವಾಮಿ ವಿವೇಕಾನಂದರ ಜನ್ಮದಿನದ ಅಂಗವಾಗಿ ಆಯೋಜಿಸಿದ ರಾಷ್ಟ್ರೀಯ ಯುವ ದಿನಾಚರಣೆ ‘ಯುವ ಸಪ್ತಾಹ-2016’ ನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಗರಸಭಾ ಅಧ್ಯಕ್ಷ ಪಿ.ಯುವರಾಜ್ ಕಾರ್ಯ ಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಪ್ರಾದೇಶಿಕ ಸಾರಿಗೆ ಅಕಾರಿ ಸುರೇಂದ್ರಪ್ಪ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್‌ಕುಮಾರ್ ಶೆಟ್ಟಿ, ತೆಂಕನಿಡಿಯೂರು ಪ್ರ.ದ. ಕಾಲೇಜಿನ ಪ್ರಾಂಶುಪಾಲ ಡಾ.ನಿಕೇತನ, ಡಾ.ಜಿ.ಶಂಕರ್ ಸರಕಾರಿ ಪ್ರ.ದ. ಕಾಲೇಜಿನ ಪ್ರಾಂಶುಪಾಲ ಪ್ರೊ.ಜಗದೀಶ ರಾವ್, ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲ ಡಾ.ನೇರಿ ಕರ್ನೆಲಿಯೊ, ಲಯನ್ಸ್ ಜಿಲ್ಲಾ ಗವರ್ನರ್ ಶ್ರೀಧರ ಡಿ ಶೇಣವ, ಜ್ಯೋತಿ ಶೇಣವ, ಲಯನೆಸ್‌ನ ನಿರುಪಮಾ ಪ್ರಸಾದ್, ಉದ್ಯಮಿ ಮನೋಹರ ಶೆಟ್ಟಿ ಉಪಸ್ಥಿತರಿದ್ದರು.
ರೆಡ್‌ಕ್ರಾಸ್ ಸಂಸ್ಥೆಯ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ ಸ್ವಾಗತಿಸಿದರು, ಎನ್.ಎಂ.ಹೆಗಡೆ ಕಾರ್ಯಕ್ರಮ ನಿರೂಪಿಸಿದರು.