ಸೋನಿಯಾ ಪರ ಜೇಠ್ಮಲಾನಿ ವಾದ?
ನವದೆಹಲಿ: ರಾಷ್ಟ್ರದ ಗಮನ ಸೆಳೆದಿರುವ ನ್ಯಾಷನಲ್ ಹೆರಾಲ್ಡ್ ಅವ್ಯವಹಾರ ಪ್ರಕರಣದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್‌ಗಾಂಧಿ ಪರವಾಗಿ ವಾದ ಮಂಡಿಸಲು ಸಿದ್ಧ ಎಂದು ಕೇಂದ್ರದ ಮಾಜಿ ಸಚಿವ ಹಾಗೂ ಹಿರಿಯ ವಕೀಲ ರಾಂ ಜೇಠ್ಮಲಾನಿ ಪ್ರಕಟಿಸಿದ್ದಾರೆ.
ಬಿಜೆಪಿ ಮುಖಂಡ ಸುಬ್ರಹ್ಮಣ್ಯನ್ ಸ್ವಾಮಿ ಪ್ರಕರಣದಲ್ಲಿ ಸೋನಿಯಾ ಹಾಗೂ ರಾಹುಲ್ ವಿರುದ್ಧ ದಾವೆ ಹೂಡಿದ್ದಾರೆ.
ಸೋನಿಯಾಗಾಂಧಿಯವರಿಗೆ ಈ ಸಂಬಂಧ ಪತ್ರ ಬರೆದಿರುವ ದೇಶದ ಅತ್ಯಂತ ದುಬಾರಿ ವಕೀಲ, "ಕಾಂಗ್ರೆಸ್ ಪಕ್ಷದಲ್ಲಿ ಹಲವು ಮಂದಿ ಉತ್ತಮ ವಕೀಲರಿದ್ದಾರೆ ಎನ್ನುವುದನ್ನು ನಾನು ಬಲ್ಲೆ. ಆದರೆ ನಿಮಗೆ ಅಗತ್ಯ ಎನಿಸಿದರೆ ನನ್ನ ಸೇವೆ ನಿಮಗೆ ಲಭ್ಯವಿದೆ" ಎಂದು ಸ್ಪಷ್ಟಪಡಿಸಿದ್ದಾರೆ. ಇದಕ್ಕೆ ಯಾವುದೇ ಶುಲ್ಕ ಅಥವಾ ಪ್ರತಿಫಲ ನೀಡಬೇಕಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಉಭಯ ಮುಖಂಡರು ಯಾವುದೇ ಅವ್ಯವಹಾರ ಮಾಡಿಲ್ಲ ಎನ್ನುವುದು ನನಗೆ ಮನವರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ವಿಚಾರಣಾ ನ್ಯಾಯಾಲಯದಲ್ಲಿ ಅವರ ಪರವಾಗಿ ಉಚಿತವಾಗಿ ವಾದ ಮಂಡಿಸಲು ಸಿದ್ಧ ಎಂದು ಹೇಳಿದ್ದಾರೆ.